ADVERTISEMENT

ಕಾರಟಗಿ: ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಇಂದಿನಿಂದ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 5:09 IST
Last Updated 7 ಫೆಬ್ರುವರಿ 2026, 5:09 IST
ಲಾಂಛನ
ಲಾಂಛನ   

ಕಾರಟಗಿ: ಜಿಲ್ಲೆಯಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಶನಿವಾರದಿಂದ 2 ದಿನಗಳವರೆಗೆ ಪಟ್ಟಣದಲ್ಲಿ ನಡೆಯಲಿದೆ.

ಪ್ರಧಾನ ವೇದಿಕೆ ಕರ್ನಾಟಕ ಪಬ್ಲಿಕ್‌ ಶಾಲೆಯ ಮೈದಾನದಲ್ಲಿರುವ ಸಿದ್ದೇಶ್ವರ ರಂಗ ಮಂದಿರದ ಮುಂಭಾಗದಲ್ಲಿ ಸಿದ್ದಪಡಿಸಲಾಗಿದ್ದು, ಸ್ಫರ್ಧೆಗಳು ವಿವಿಧೆಡೆ ನಡೆಯಲಿದೆ.

ರಾಜ್ಯದ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಪ್ರಧಾನ ವೇದಿಕೆ ಸಿಂಗಾರಗೊಂಡಿದ್ದು, ಕಾರ್ಯಕ್ರಮದ ಯಶಸ್ಸಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ಸಿಬ್ಬಂದಿ ಶ್ರಮದ ಫಲ ಸಿದ್ಧತೆ ಪೂರ್ಣಗೊಂಡಿದೆ.

ADVERTISEMENT

ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಆಗಮಿಸುತ್ತಿದ್ದು ನೋಂದಣಿ ಕಾರ್ಯ ಆರಂಭಗೊಂಡಿದೆ. ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಸೋಮಶೇಖರಗೌಡ ಮಾರ್ಗದರ್ಶನದಲ್ಲಿ 18 ಉಪ ಸಮಿತಿಗಳನ್ನು ರಚಿಸಲಾಗಿದೆ.

ಸೋಮಶೇಖರಗೌಡ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಿದರು.

ಜಾನಪದ ನೃತ್ಯ, ಗೀತೆ, ಕವನ ವಾಚನ, ಭಾಷಣ, ಕವ್ವಾಲಿ, ಭರತನಾಟ್ಯ ಸೇರಿದಂತೆ ವೈಯಕ್ತಿಕ ಹಾಗೂ ಗುಂಪು ಸ್ಫರ್ಧೆ ಸೇರಿ 26 ಸ್ಪರ್ಧೆಗಳು ನಡೆಯಲಿವೆ. 75 ನಿರ್ಣಾಯಕರನ್ನು ನೇಮಿಸಲಾಗಿದ್ದು, ಪ್ರತಿ ಸ್ಪರ್ಧೆಯ ಮೇಲ್ವಿಚಾರಣೆ, ನಿರಂತರ ಸಂವಹನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.

ಊಟದ ಸ್ಥಳಗಳಿಗೆ ತೆರಳಲು ಪ್ರತ್ಯೇಕವಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಬಾಲಕಿಯರಿಗೆ 7 ಕಡೆಗೆ ಮತ್ತು ಬಾಲಕರಿಗೆ 6 ಕಡೆ ಪ್ರತ್ಯೇಕ ವಸತಿ ವ್ಯವಸ್ಥೆ ಮಾಡಲಾಗಿದೆ. ಸ್ಪರ್ಧಿಗಳಿಗೆ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ.

ಕಾರಟಗಿಯಲ್ಲಿ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಕ್ಕೆ ಸಿದ್ಧಗೊಂಡ ವೇದಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.