
ಪ್ರಜಾವಾಣಿ ವಾರ್ತೆ
ಬೀದಿನಾಯಿ
(ಪ್ರಾತಿನಿಧಿಕ ಚಿತ್ರ)
ಕನಕಗಿರಿ: ಪಟ್ಟಣದ 2ನೇ ವಾರ್ಡ್‌ನಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ, ಪೌರ ಕಾರ್ಮಿಕ, ಬಾಲಕಿ ಸೇರಿದಂತೆ ಸಾರ್ವಜನಿಕರಿಗೆ ಹುಚ್ಚುನಾಯಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.
ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬೀದಿನಾಯಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಸೂಚಿಸಬೇಕು. ಕೈಗೊಳ್ಳಲಾದ ಕ್ರಮದ ಕುರಿತು 5 ದಿನಗಳ ಒಳಗಾಗಿ ಆಯೋಗಕ್ಕೆ ವರದಿ ಸಲ್ಲಿಸಬೇಖು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.