ADVERTISEMENT

ಒಳ ಮೀಸಲಾತಿಗೆ ಒತ್ತಾಯಿಸಿ 16ರಿಂದ ಹೋರಾಟ: ಕಾರಜೋಳ

​ಪ್ರಜಾವಾಣಿ ವಾರ್ತೆ
Published 20 ಜುಲೈ 2025, 21:26 IST
Last Updated 20 ಜುಲೈ 2025, 21:26 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಗಂಗಾವತಿ: ‘ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಜಾರಿಗೆ ಆಗಸ್ಟ್‌ 1ರ ತನಕ ಸರ್ಕಾರಕ್ಕೆ ಗಡುವು ನೀಡಲಾಗಿದೆ. ಬೇಡಿಕೆ ಈಡೇರದಿದ್ದರೆ ಆ. 16ರಿಂದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ, ತಹಶೀಲ್ದಾರ್‌ ಕಚೇರಿಗಳಿಗೆ ಬೀಗ ಹಾಕಿ ಮಾದಿಗ ಸಮುದಾಯ ಹೋರಾಟ ನಡೆಸಲಿದೆ’ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೇಳಿದರು.

ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ‘ಅಧಿಕಾರಕ್ಕೆ ಬಂದ ತಕ್ಷಣವೇ ಒಳಮೀಸಲಾತಿ ನೀಡುವ ಭರವಸೆ ನೀಡಿದ್ದ ರಾಜ್ಯದ ಕಾಂಗ್ರೆಸ್‌ ಸರ್ಕಾರ ಮಾತಿನಂತೆ ನಡೆದುಕೊಂಡಿಲ್ಲ. ತೆಲಂಗಾಣ, ಆಂಧ್ರ, ಬಿಹಾರ ಸೇರಿ ಹಲವು ರಾಜ್ಯಗಳು ಜಾರಿ ಮಾಡಿವೆ. ಸಿ.ಎಂ ಹೀಗೇ ನಿರ್ಲಕ್ಷ್ಯಿಸಿದರೆ ಆಡಳಿತ ನಡೆಸಲೂ ಬಿಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT