ಹನುಮಸಾಗರ (ಕೊಪ್ಪಳ ಜಿಲ್ಲೆ): ಕುಷ್ಟಗಿ ತಾಲ್ಲೂಕಿನ ಕೋನಾಪುರ ಮತ್ತು ಪರಮನಹಟ್ಟಿ ಗ್ರಾಮಗಳ ವಿದ್ಯಾರ್ಥಿಗಳು ಬಸ್ ಸೌಲಭ್ಯಕ್ಕೆ ಒತ್ತಾಯಿಸಿ ಶುಕ್ರವಾರ ನಡೆಸಿದ ಪ್ರತಿಭಟನೆಗೆ ಸ್ಪಂದನೆ ಸಿಕ್ಕಿದ್ದು, ಶನಿವಾರ ಬಸ್ ಸಂಚಾರ ಸೇವೆ ಆರಂಭಗೊಂಡಿತು.
ಗ್ರಾಮಗಳಿಗೆ ಬಸ್ ಬರುತ್ತಿದ್ದಂತೆ ವಿದ್ಯಾರ್ಥಿಗಳು ಸಂಭ್ರಮಿಸಿದರು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು.
‘ಬಸ್ ಸೌಲಭ್ಯವಿಲ್ಲದೇ ನಿತ್ಯ 4 ಕಿ.ಮೀ ನಡೆದು ಹೋಗಬೇಕಿತ್ತು. ಸಮಸ್ಯೆಯನ್ನು ಮನಗಾಣಿಸಲು ಪ್ರತಿಭಟಿಸಿದ್ದೆವು. ಈಗ ಬಸ್ ಸಂಚಾರ ಆರಂಭಗೊಂಡಿದ್ದು, ಖುಷಿ ತಂದಿದೆ’ ಎಂದು ವಿದ್ಯಾರ್ಥಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.