ADVERTISEMENT

ಆತಂಕ ಪಡದೆ ವಿದ್ಯಾರ್ಥಿಗಳು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು- ಮಂಜುನಾಥ ಜಾಲಿಹಾಳ

​ಪ್ರಜಾವಾಣಿ ವಾರ್ತೆ
Published 7 ಜನವರಿ 2022, 11:42 IST
Last Updated 7 ಜನವರಿ 2022, 11:42 IST
ಹನುಮಸಾಗರದ ಸರ್ವೋದಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್‌ ಲಸಿಕೆ ನೀಡಲಾಯಿತು
ಹನುಮಸಾಗರದ ಸರ್ವೋದಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್‌ ಲಸಿಕೆ ನೀಡಲಾಯಿತು   

ಹನುಮಸಾಗರ: ‘ಯಾವುದೇ ಆತಂಕಕ್ಕೆ ಒಳಗಾಗದೆ ವಿದ್ಯಾರ್ಥಿಗಳು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಆರೋಗ್ಯ ಸಮುದಾಯ ಅಧಿಕಾರಿ ಮಂಜುನಾಥ ಜಾಲಿಹಾಳ ಹೇಳಿದರು.

ಇಲ್ಲಿನ ಸರ್ವೋದಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವ್ಯಾಕ್ಸಿನ್ ಲಸಿಕೆ ಕೋವಿಡ್ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಎಂದು 15 ರಿಂದ 18 ವಯೋಮಾನದ ಮಕ್ಕಳಿಗೆ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ. ಲಸಿಕೆ ಪಡೆಯುವ ಮಕ್ಕಳಿಗೆ ಯಾವುದೇ ರೀತಿಯ ಅಡ್ಡ ಪರಿಣಾಮ ಆಗುವುದಿಲ್ಲ. ಬದಲಾಗಿ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿ ಯಾವುದೇ ತರಹದ ರೋಗಗಳು ಬಾರದೇ ಆರೋಗ್ಯವಾಗಿರಲು ಸಹಕಾರಿಯಾಗುತ್ತದೆ ಎಂದರು.

ADVERTISEMENT

ಶಾಲೆಯ ಸಂಸ್ಥಾಪಕ ಅಧ್ಯಕ್ಷ ಶ್ರೀನಿವಾಸ ಜಹಗೀರದಾರ ಮಾತನಾಡಿದರು.

ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಪಾರ್ವತಿ ನಿಡಗುಂದಿ, ಶಾರದಾ ಹಡಪದ, ಬಸವರಾಜ, ಸಂಸ್ಥೆಯ ಅಧ್ಯಕ್ಷ ಪ್ರಾಣೇಶ ಪಪ್ಪು, ಆಡಳಿತಾಧಿಕಾರಿ ವಿಶ್ವನಾಥ ನಾಗೂರ, ಮುಖ್ಯ ಶಿಕ್ಷಕ ರಮೇಶ ಅಂಬಿಗ, ಶಿಕ್ಷಕ, ಶಿಕ್ಷಕಿಯರು, ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ಹುಸೇನ ಮುದಗಲ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.