ADVERTISEMENT

ಕೊಪ್ಪಳ: ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2022, 5:22 IST
Last Updated 26 ನವೆಂಬರ್ 2022, 5:22 IST
ಕೊಪ್ಪಳ ತಾಲ್ಲೂಕಿನ ಹಾಲವರ್ತಿ ಗ್ರಾಮದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಎಐಡಿಎಸ್‌ಒ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಮಾತನಾಡಿದರು
ಕೊಪ್ಪಳ ತಾಲ್ಲೂಕಿನ ಹಾಲವರ್ತಿ ಗ್ರಾಮದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಎಐಡಿಎಸ್‌ಒ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಮಾತನಾಡಿದರು   

ಕೊಪ್ಪಳ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನದ ಅಂಗವಾಗಿ ‘ನೇತಾಜಿ ಜೀವನ ಹಾಗೂ ಸಂಘರ್ಷ’ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿತ್ತು.

ತಾಲ್ಲೂಕಿನ ಹಾಲವರ್ತಿ ಗ್ರಾಮದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಡಿಎಸ್‌ಒ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಮಾತನಾಡಿ ‘ನೇತಾಜಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಪ್ರೇರಣೆ ಪಡೆದವರು. ಶ್ರೀಮಂತ ಕುಟುಂಬದಲ್ಲಿ ಬೆಳೆದರೂ ದೇಶಕ್ಕಾಗಿ ಪ್ರಾಣ ಅರ್ಪಿಸಿದರು. ಕೇವಲ ಬ್ರಿಟಿಷರಿಂದ ದೇಶವನ್ನು ಮುಕ್ತಿಗೊಳಿಸಿದರೆ ಸಾಕಾಗುವುದಿಲ್ಲ; ಮಾನವನಿಂದ ಮಾನವನ ಶೋಷಣೆಯನ್ನು ಕೊನೆಗಾಣಿಸಬೇಕು ಎನ್ನುವ ಸಂಕಲ್ಪ ಮಾಡಿದ್ದರು’ ಎಂದರು.

ಶಾಲೆಯ ಪ್ರಾಚಾರ್ಯ ಜಾಕಿರ್ ಹುಸೇನ್, ಸಂಘಟನೆಯ ಸದಸ್ಯ ಮನೋಜ್ ಕುಮಾರ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.