ADVERTISEMENT

ಗುಣಮಟ್ಟದ ಶಿಕ್ಷಣ ಪಡೆಯಿರಿ: ಎಸ್‌ಡಿಎಂಸಿ ಉಪಾಧ್ಯಕ್ಷ ಶಿವಪ್ಪ ಕಂಪ್ಲಿ ಸಲಹೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 6:09 IST
Last Updated 12 ಜನವರಿ 2022, 6:09 IST
ಹನುಮಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು
ಹನುಮಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು   

ಹನುಮಸಾಗರ: ‘ಸರ್ಕಾರ ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗಾಗಿ ಬಿಸಿಯೂಟ ಸೇರಿದಂತೆ ಪಠ್ಯಪುಸ್ತಕ, ಸಮವಸ್ತ್ರ, ಶಿಷ್ಯವೇತನ, ಬೈಸಿಕಲ್ ನೀಡುತ್ತಿದೆ. ಈ ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳುವುದರ ಜತೆಗೆ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಬೇಕು’ ಎಂದು ಶಾಲಾ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಶಿವಪ್ಪ ಕಂಪ್ಲಿ ಹೇಳಿದರು.

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿದರು.

ಮುಖ್ಯಶಿಕ್ಷಕ ಹುಸೇನಸಾಬ ಇಲಕಲ್ಲ ಮಾತನಾಡಿ,‘ಸದ್ಯ ವಿದ್ಯಾರ್ಥಿಗಳು ಪಡೆದಿರುವ ಬಟ್ಟೆಗಳನ್ನು ಆದಷ್ಟು ಬೇಗ ಹೊಲಿಸಿ ನಿತ್ಯ ಸಮವಸ್ತ್ರ ಧರಿಸಿ ಶಾಲೆಗೆ ಹಾಜರಾಗಬೇಕು’ ಎಂದು ಹೇಳಿದರು.

ADVERTISEMENT

ಮುಖಂಡ ಖಾಜೇಸಾಬ ಡಲಾಯಿತ್, ಶಿಕ್ಷಕರಾದ ಉಮಾಕಾಂತ ರಜಪೂತ, ರಾಜೇಬಕ್ಷಾರ ಪೆಂಡಾರಿ, ಚಂದ್ರಶೇಖರ ಹಾಗೂ ರಾಮಚಂದ್ರ ಬಡಿಗೇರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.