ADVERTISEMENT

‘ಮಕ್ಕಳ ವ್ಯಕ್ತಿತ್ವ ರೂಪಿಸುವಪಠ್ಯೇತರ ಚಟುವಟಿಕೆಗಳು’

​ಪ್ರಜಾವಾಣಿ ವಾರ್ತೆ
Published 14 ಜನವರಿ 2022, 6:12 IST
Last Updated 14 ಜನವರಿ 2022, 6:12 IST
ಯಲಬುರ್ಗಾ ತಾಲ್ಲೂಕು ವಣಗೇರಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ಆಯೋಜಿಸಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು
ಯಲಬುರ್ಗಾ ತಾಲ್ಲೂಕು ವಣಗೇರಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ಆಯೋಜಿಸಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು   

ಯಲಬುರ್ಗಾ: ತಾಲ್ಲೂಕಿನ ವಣಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಪರಿಷತ್ತಿನ ಅಧ್ಯಕ್ಷ ಹನಮಂತಪ್ಪ ಉಪ್ಪಾರ ಮಾತನಾಡಿ, ಮಕ್ಕಳಲ್ಲಿ ವ್ಯಕ್ತಿತ್ವ ವಿಕಾಸಗೊಳ್ಳುವಲ್ಲಿ ಪಠ್ಯೇತರ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ. ಅಲ್ಲದೇ ಕಲಿಕಾ ಸಾಮರ್ಥ್ಯ ವೃದ್ಧಿಗೊಳಿಸುವ ಇಂಥ ಚಟುವ ಟಿಕೆಗಳಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಸ್ವಾಮಿ ವಿವೇಕಾನಂದರ ಪ್ರತಿಯೊಂದು ವಿಚಾರಗಳು ನಮಗೆ ಆದರ್ಶವಾಗಬೇಕಾಗಿದೆಎಂದು ಮಕ್ಕಳಿಗೆ ಸಲಹೆ ನೀಡಿದರು.

ADVERTISEMENT

ಬಿಆರ್‌ಸಿ ಶಿವಪ್ಪ ಉಪ್ಪಾರ ಮಾತನಾಡಿ, ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ರೂಢಿಸಿ ಕೊಳ್ಳಬೇಕಾಗಿದೆ. ಮಾನವೀಯ ಗುಣಗಳು, ಅಧ್ಯಯನಶೀಲತೆ ಮತ್ತು ಕ್ರೀಯಾಶೀಲತೆ ರೂಢಿಸಿಕೊಂಡು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಕುಕನೂರು ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಕಲ್ಲಪ್ಪ ಕವಳಕೇರಿ ಮಾತನಾಡಿ, ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ. ಕೀಳರಿಮೆ ಬಿಟ್ಟು ಎಲ್ಲ ಸ್ಪರ್ಧೆಗಳಲ್ಲಿ ಭಾಗವಹಿಸುವುದನ್ನು ರೂಢಿಸಿಕೊಂಡರೆ ಯಶಸ್ಸು ನಿಶ್ಚಿತ ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಪರಶುರಾಮ ತಳವಾರ್, ಶಿಕ್ಷಕಿ ಯಶೋಧ, ಮಾಂತೇಶ್ ಹಿರೇಮಠ ಮಾತನಾಡಿದರು. ಸುರೇಶ್ ಮಡಿವಾಳರ, ಶರಣಪ್ಪ ಹಾಳಕೇರಿ ಹನುಮಪ್ಪ ಹಳ್ಳಿ, ಕುಮಾರ್, ಅಮೃತಬಾಯಿ ಹಿರೇಮಠ, ಹೇಮಲತಾ, ಕಾವ್ಯ ಹಾಗೂ ನಂದಿನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.