ADVERTISEMENT

‘ಸ್ವಾಮೀಜಿ ಸೇವೆ ನಮ್ಮ ನಾಡಿನ ಭಾಗ್ಯ’

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 1:56 IST
Last Updated 2 ಆಗಸ್ಟ್ 2022, 1:56 IST
ಕೊಪ್ಪಳದಲ್ಲಿ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಚರ್ಚೆಯಲ್ಲಿ ತೊಡಗಿದ್ದ ಜನ
ಕೊಪ್ಪಳದಲ್ಲಿ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಚರ್ಚೆಯಲ್ಲಿ ತೊಡಗಿದ್ದ ಜನ   

ಕೊಪ್ಪಳ: ‘ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮಾಡುತ್ತಿರುವ ಜನಪರ ಕಾರ್ಯ ಎಲ್ಲರಿಗೂ ಮಾದರಿಯಾಗಿದೆ. ಅವರು ನಮ್ಮ ನಾಡಿನ ಭಾಗ್ಯ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗವಿಮಠಕ್ಕೆ ಸೋಮವಾರ ಭೇಟಿ ನೀಡಿದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಬಡ ಮಕ್ಕಳಿಗೆ ಉಚಿತ ಊಟ ಹಾಗೂ ವಸತಿ ನಿಲಯ ನಿರ್ಮಾಣ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಸ್ವಾಮೀಜಿಯ ದೊಡ್ಡ ಸೇವೆ ಈ ಭಾಗದ ಬಡವರಿಗೆ ನಂದಾದೀಪವಾಗಿದೆ’ ಎಂದರು.

‘ಸ್ವಾಮೀಜಿ 8ರಿಂದ 10 ಸಾವಿರ ಮಕ್ಕಳಿಗೆ ವಸತಿ ನಿಲಯ ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ಹಿಂದುಳಿದ ಭಾಗದ ಬಡ ಮಕ್ಕಳ ಪಾಲಿಗೆ ಆಶಾಕಿರಣವಾಗಿದ್ದಾರೆ. ಸರ್ಕಾರ ಮತ್ತು ಸಮಾಜ ಮಾಡುವ ಕೆಲಸವನ್ನು ಸ್ವಾಮೀಜಿ ಮಾಡುತ್ತಿದ್ದಾರೆ. ಅವರ ಎಲ್ಲಾ ಆಸೆ ಮತ್ತು ಕನಸು ಈಡೇರುತ್ತದೆ’ ಎಂದರು..

ADVERTISEMENT

ಗವಿಮಠದಲ್ಲಿ ಉಚಿತ ವಸತಿ ನಿಲಯ ನಿರ್ಮಾಣಕ್ಕೆ ಸರ್ಕಾರ ₹10 ಕೋಟಿ ಘೋಷಿಸಿತ್ತು. ಇದಕ್ಕೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಅದರ ಪ್ರತಿಯನ್ನು ಮುಖ್ಯಮಂತ್ರಿ ಸ್ವಾಮೀಜಿಗೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.