ADVERTISEMENT

ಆಸ್ಪತ್ರೆಗೆ ತಹಶೀಲ್ದಾರ್ ಭೇಟಿ

​ಪ್ರಜಾವಾಣಿ ವಾರ್ತೆ
Published 12 ಮೇ 2021, 6:21 IST
Last Updated 12 ಮೇ 2021, 6:21 IST
ಕನಕಗಿರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಹಶೀಲ್ದಾರ್ ರವಿ ಅಂಗಡಿ ಭೇಟಿ ನೀಡಿ ಮಾಹಿತಿ ಪಡೆದರು
ಕನಕಗಿರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಹಶೀಲ್ದಾರ್ ರವಿ ಅಂಗಡಿ ಭೇಟಿ ನೀಡಿ ಮಾಹಿತಿ ಪಡೆದರು   

ಕನಕಗಿರಿ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಹಶೀಲ್ದಾರ್ ರವಿ ಅಂಗಡಿ ಮಂಗಳವಾರ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ವೈದ್ಯಾಧಿಕಾರಿ ಡಾ. ಪವನಕುಮಾರ ಮಾತನಾಡಿ,‘ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 142 ಮಂದಿ ಕೊರೊನಾ ಸೋಂಕಿತರಿದ್ದು, 66 ಜನರು ಗುಣಮುಖರಾಗಿದ್ದಾರೆ. 76 ಮಂದಿ ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ತಿಳಿಸಿದರು.

ತಹಶೀಲ್ದಾರ್ ರವಿ ಅಂಗಡಿ ಮಾತನಾಡಿ,‘ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಆಸ್ಪತ್ರೆಗೆ ಭೇಟಿ ನೀಡಿ ಲಸಿಕೆ ಪಡೆಯಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು’ ಎಂದು ಹೇಳಿದರು. ಡಾ.ಶ್ವೇತಾಶ್ರೀ, ಡಾ.ಕಲ್ಲಪ್ಪ ಹಾಗೂ ಇತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.