ADVERTISEMENT

‘ಸ್ಕ್ಯಾನಿಂಗ್ ಸೆಂಟರ್‌’ಗಳಿಗೆ ತಹಶೀಲ್ದಾರ್ ಭೇಟಿ

​ಪ್ರಜಾವಾಣಿ ವಾರ್ತೆ
Published 10 ಮೇ 2021, 13:19 IST
Last Updated 10 ಮೇ 2021, 13:19 IST
ಗಂಗಾವತಿಯ ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ತಹಶೀಲ್ದಾರ್ ನಾಗರಾಜ ಭಾನುವಾರ ಭೇಟಿ ನೀಡಿದರು
ಗಂಗಾವತಿಯ ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ತಹಶೀಲ್ದಾರ್ ನಾಗರಾಜ ಭಾನುವಾರ ಭೇಟಿ ನೀಡಿದರು   

ಗಂಗಾವತಿ: ನಗರದಲ್ಲಿರುವ ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ತಹಶೀಲ್ದಾರ್ ನಾಗರಾಜ ಅವರು ಭಾನುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ‌

ನಂತರ ಮಾತನಾಡಿದ ಅವರು,‘ಕೊರೊನಾ ಸೋಂಕು ತಪಾಸಣೆಗೆ ಸ್ಕ್ಯಾನಿಂಗ್ ಅವಶ್ಯಕತೆ ಇದ್ದು, ಸಾರ್ವಜನಿಕರು ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ತಪಾಸಣೆ ಮಾಡಿಸುತ್ತಿದ್ದಾರೆ. ಸೆಂಟರ್‌ಗಳ ಮಾಲೀಕರು ಅಧಿಕ ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವ ದೂರುಗಳು ಬಂದಿವೆ. ಹಾಗಾಗಿ ಪರಿಶೀಲನೆ ನಡೆಸಿದ್ದೇವೆ’ ಎಂದರು.

ಯಾವುದೇ ಕಾರಣಕ್ಕೂ ಸ್ಕ್ಯಾನಿಂಗ್ ಸೆಂಟರ್‌ಗಳ ಮಾಲೀಕರು ಸರ್ಕಾರ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುವಂತಿಲ್ಲ. ಒಂದು ವೇಳೆ ಅಧಿಕ ಹಣ ಪಡೆದಿದ್ದು ಕಂಡುಬಂದರೇ ಕೂಡಲೇ ಸೂಕ್ತ ಕ್ರಮಕ್ಕೆ ಮುಂದಾಗಲಾಗುವುದು ಎಂದು ಹೇಳಿದರು. ‌

ADVERTISEMENT

ಗ್ರಾಮ ಲೆಕ್ಕಾಧಿಕಾರಿ ಶರಣಪ್ಪ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.