ADVERTISEMENT

ಪ್ರತಿ ಮನೆಗೂ ಧ್ವಜ ಸಿಗುವಂತೆ ಕ್ರಮ ವಹಿಸಿ: ಬಿ.ಫೌಜಿಯಾ ತರನ್ನುಮ್

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2022, 4:56 IST
Last Updated 9 ಆಗಸ್ಟ್ 2022, 4:56 IST
ಬಿ.ಫೌಜಿಯಾ ತರನ್ನುಮ್
ಬಿ.ಫೌಜಿಯಾ ತರನ್ನುಮ್   

ಕೊಪ್ಪಳ: ‘ಹರ್ ಘರ್ ತಿರಂಗಾ ಕಾರ್ಯಕ್ರಮ ನಿಮಿತ್ತ ಜಿಲ್ಲೆಯ ಪ್ರತಿ ಮನೆಗಳಿಗೂ ಧ್ವಜ ಸಿಗುವಂತೆ ಕಾರ್ಯ ಪ್ರವೃತ್ತರಾಗಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಬಿ. ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಭೆ ಬಳಿಕ ಅವರು ಇಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

‘ಹರ್ ಘರ್ ತಿರಂಗಾ ಅಭಿಯಾನದಡಿ ಜಿಲ್ಲೆಯ ಒಟ್ಟು 3.2 ಲಕ್ಷ ಮನೆಗಳ ಪೈಕಿ 2.40 ಲಕ್ಷ ಮನೆಗಳ ಮೇಲೆ ಧ್ವಜಾರೋಹಣ ಮಾಡುವಂತೆ ಸರ್ಕಾರದಿಂದ ಗುರಿ ನೀಡಲಾಗಿದೆ. ಜಿಲ್ಲೆಗೆ ರಾಜ್ಯ ಸರ್ಕಾರದಿಂದ 72 ಸಾವಿರ, ಅನನ್ಯ ಸಂಸ್ಥೆಯ ಮೂಲಕ ಖರೀದಿಸಿದ 1 ಲಕ್ಷ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಮೂಲಕ ಸೇರಿದಂತೆ ಒಟ್ಟು 1.89 ಲಕ್ಷ ಧ್ವಜಗಳು ಲಭ್ಯ ಇವೆ. ಅಂಚೆ ಕಚೇರಿಯಲ್ಲಿಯೂ ಧ್ವಜಗಳು ಸಿಗುತ್ತವೆ. ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ಸನ್ಮಾನ ಮಾಡಲಾಗುವುದು’ ಎಂದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಉಪ ವಿಭಾಗಾಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಮೀರ್ ಮುಲ್ಲಾ, ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಪ್ರಾಣೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೋಟ್ರೇಶ್ ಮರಬನಳ್ಳಿ ಇದ್ದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಮತ್ತು ಕಟ್ಟಡಗಳ ಮೇಲೆ ಶಿಷ್ಟಾಚಾರದಂತೆ ಧ್ವಜಾರೋಹಣ ಮಾಡಬೇಕು. ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು.
- ಬಿ.ಫೌಜಿಯಾ ತರನ್ನುಮ್,ಜಿಲ್ಲಾ ಪಂಚಾಯಿತಿ ಸಿಇಒ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.