ತಾವರಗೇರಾ: ಪಟ್ಟಣದಲ್ಲಿ ಬೆಳಿಗ್ಗೆ 6 ಗಂಟೆಯಿಂದ ಆರಂಭವಾದ ಮಳೆಯು ದಿನವಿಡೀ ಸುರಿಯಿತು. ಮಧ್ಯಾಹ್ನ ಸ್ವಲ್ಪ ವಿರಾಮ ನೀಡಿದ ಮಳೆ ಮತ್ತೆ ಸಂಜೆ ಆರಂಭವಾಯಿತು. ಜೋರಾದ ಮಳೆಗೆ ಜಮೀನುಗಳ ಬದುವುಗಳಲ್ಲಿ ನೀರಿನ ಸಂಗ್ರಹ ಹೆಚ್ಚಾಗಿದೆ.
ಮಳೆಯಾಶ್ರಿತ ಪ್ರದೇಶದಲ್ಲಿ ತೊಗರಿ ಬೆಳೆ ಮತ್ತು ಹಿಂಗಾರು ಬಿತ್ತನೆಗೆ ಅನೂಕೂಲವಾಗಿದೆ. ಮಳೆಯಿಂದ ಗುಡ್ಡ ಮತ್ತು ಅರಣ್ಯ ಪ್ರದೇಶಗಳಲ್ಲಿ ಪಶು ಪಕ್ಷಿಗಳಿಗೆ ನೀರಿನ ದಾಹ ನೀಗಿದಂತಾಗಿದೆ. ಅಲ್ಲದೇ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಈ ಹಿಂಗಾರು ಮಳೆಯಿಂದ ಜಾನುವಾರುಗಳಿಗೆ ಆಹಾರ, ಮೇವು ಸಿಗುತ್ತಿದೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಈ ವರ್ಷದಲ್ಲಿ ಹಲವು ಸಲ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ ಎನ್ನುತ್ತಾರೆ ರೈತರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.