
ಪ್ರಜಾವಾಣಿ ವಾರ್ತೆ
ಹನುಮಸಾಗರ: ಕುಷ್ಟಗಿ ತಾಲ್ಲೂಕಿನ ಹನುಮಸಾಗರ ಗ್ರಾಮದ ಕೆಪಿಎಸ್ ಶಾಲೆಯ ಶಿಕ್ಷಕ ಮೆಹಬೂಬಸಾಬ್ ಕಸಾಬ್ (59) ಅವರು ಬುಧವಾರ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮಧ್ಯಾಹ್ನ 12.20ರ ಸುಮಾರಿಗೆ ಅವರು ತರಗತಿಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದರಿಂದ ಸಹ ಸಿಬ್ಬಂದಿ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಅವರು ಮಾರ್ಗಮಧ್ಯದಲ್ಲಿಯೇ ನಿಧನರಾದರು. 2026ರ ಮೇ 31ರಂದು ಅವರು ನಿವೃತ್ತಿಯಾಗುತ್ತಿದ್ದರು. ಮೃತರಿಗೆ ಪತ್ನಿ ಹಾಗೂ ಒಬ್ಬ ಪುತ್ರ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.