ADVERTISEMENT

ಕುಷ್ಟಗಿ | ಮಕ್ಕಳ ನಾಡಿಮಿಡಿತ ಅರಿಯುವ ಕೌಶಲ ಅಗತ್ಯ: ಡಿಡಿಪಿಐ ಸೋಮಶೇಖರಗೌಡ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2025, 7:10 IST
Last Updated 24 ನವೆಂಬರ್ 2025, 7:10 IST
ಕುಷ್ಟಗಿ ತಾಲ್ಲೂಕು ತಳುವಗೇರಾದಲ್ಲಿ ಫಲಿತಾಂಶ ಸುಧಾರಣೆ ಕಾರ್ಯಾಗಾರದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ ಮಾತನಾಡಿದರು
ಕುಷ್ಟಗಿ ತಾಲ್ಲೂಕು ತಳುವಗೇರಾದಲ್ಲಿ ಫಲಿತಾಂಶ ಸುಧಾರಣೆ ಕಾರ್ಯಾಗಾರದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ ಮಾತನಾಡಿದರು   

ಕುಷ್ಟಗಿ: ‘‘ಸಮಾಜದ ನೋವು, ನಿರೀಕ್ಷೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ವಿದ್ಯಾರ್ಥಿಗಳ ನಾಡಿ ಮಿಡಿತವನ್ನು ಅರಿಯುವ ಕೌಶಲ ಶಿಕ್ಷಕರಲ್ಲಿ ಇರುವುದು ಅಗತ್ಯ’ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ ಹೇಳಿದರು.

2025-26ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಸಂಬಂಧಿಸಿದಂತೆ ತಾಲ್ಲೂಕಿನ ತಳುವಗೇರಾದ ಆದರ್ಶ ವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಉತ್ತಮ ಫಲಿತಾಂಶ ಪಡೆಯುವುದಕ್ಕೆ ಶಿಕ್ಷಕರು ಈಗಿನಿಂದಲೇ ಹೆಚ್ಚು ಮುತುವರ್ಜಿ ವಹಿಸುವುದು ಅಗತ್ಯ’ ಎಂದರು.

ADVERTISEMENT

‘ವಿದ್ಯಾರ್ಥಿಗಳ ಭಾವಿ ಜೀವನಕ್ಕೆ ಉತ್ತಮ ಅಡಿಪಾಯ ಹಾಕುವ ಕೆಲಸ ಶಿಕ್ಷಕರದ್ದಾಗಿರುತ್ತದೆ. ಮಕ್ಕಳಿಗೆ ಉತ್ತಮ ಹಾಗೂ ಅಷ್ಟೇ ಗುಣಮಟ್ಟದ ಶಿಕ್ಷಣ ನೀಡಿದರೆ ಅವರು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈಯುವ ಮೂಲಕ ದೇಶಕ್ಕೆ ದೊಡ್ಡಮಟ್ಟದ ಕೊಡುಗೆ ನೀಡಬಲ್ಲರು’ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪೂರ ಮಾತನಾಡಿ, ‘ಸದ್ಯ ಉಳಿದಿರುವ ಅವಧಿಯಲ್ಲಿ ಮಕ್ಕಳಿಗೆ ಪರಿಣಾಮಕಾರಿ ಬೋಧನೆ‌ ಮಾಡುವುದರ ಮೂಲಕ ರಾಜ್ಯದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪಟ್ಟಿಯಲ್ಲಿ ಮೊದಲ ಹತ್ತು ಕ್ರಮಾಂಕದಲ್ಲಿ ಸ್ಥಾನಕ್ಕೆ ಪಡೆಯಲು ಶಿಕ್ಷಕರು ಶ್ರಮಿಸಬೇಕು ಎಂದರು.

ಡಯಟ್ ಉಪನ್ಯಾಸಕ ವೆಂಕಟೇಶಗೌಡ, ಬಿ.ಎಂ.ಸವದತ್ತಿ ಮಾತನಾಡಿದರು.

ಕ್ಷೇತ್ರ ಸಮನ್ವಯಾಧಿಕಾರಿ ಎಂ.ಜಗದೀಶಪ್ಪ, ಆದರ್ಶ ವಿದ್ಯಾಲಯದ ಮುಖ್ಯಶಿಕ್ಷಕ ಸಂಗಪ್ಪ ಕಿರೇಸೂರು, ಎಸ್‌ಡಿಎಂಸಿ ಅಧ್ಯಕ್ಷ ಶರಣಪ್ಪ, ಸದಸ್ಯರು, ತಾಲ್ಲೂಕಿನ ಅನುದಾನಿತ ಮತ್ತು ಅನುದಾನ ರಹಿತ ಸೇರಿದಂತೆ 66 ಪ್ರೌಢಶಾಲೆಗಳ ಶಿಕ್ಷಕರು ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.