ADVERTISEMENT

ಕೊಪ್ಪಳ | ಕರ್ತವ್ಯ ಲೋಪ: ಶಿಕ್ಷಕ ಅಮಾನತು

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2025, 5:24 IST
Last Updated 29 ಸೆಪ್ಟೆಂಬರ್ 2025, 5:24 IST
   

ಕೊಪ್ಪಳ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿದ ಕಾರಣಕ್ಕಾಗಿ ಕುಷ್ಟಗಿ ತಾಲ್ಲೂಕಿನ ಜೂಲಕುಂಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕ ರಾಮಪ್ಪ ತಳವಾರ ಅವರನ್ನು ಅಮಾನತು ಪಡಿಸಲಾಗಿದೆ.

ರಾಮಪ್ಪ ತಳವಾರ ಸಮೀಕ್ಷೆ ಕೆಲಸ ಆರಂಭಿಸಿಲ್ಲ ಎಂಬುದು ಸೇರಿ ಕುಷ್ಟಗಿ ಸಿಆರ್‌ಪಿ ವರದಿ ಆಧರಿಸಿ ಕ್ರಮ ಜರುಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT