ADVERTISEMENT

ತಾವರಗೇರಾ: ಶಿಕ್ಷಕರಿಂದ ಮನೆ ಮನೆ ಭೇಟಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2021, 11:08 IST
Last Updated 30 ಜೂನ್ 2021, 11:08 IST
ತಾವರಗೇರಾ ಸಮೀಪದ ಮೇಣೆಧಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರು ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿದರು
ತಾವರಗೇರಾ ಸಮೀಪದ ಮೇಣೆಧಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರು ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿದರು   

ತಾವರಗೇರಾ: ಶಿಕ್ಷಣ ಇಲಾಖೆ 2021-22ನೇ ಶೈಕ್ಷಣಿಕ ವರ್ಷ ಆರಂಭಿಸಿದ್ದು, ವಿವಿಧ ಚಟುವಟಿಕೆಗಳನ್ನು ನಡೆಸಲು ಯೋಜನೆ ರೂಪಿಸಿದೆ.

‘ವಿದ್ಯಾರ್ಥಿಗಳ ಪೋಷಕರಿಗೆ ತಿಳಿವಳಿಕೆ ನೀಡುವ ಕಾರ್ಯಕ್ರಮವನ್ನೂ ಮಾಡಲಾಗಿದೆ’ ಎಂದು ಮೆಣೇಧಾಳ ಸಿಆರ್‌ಪಿ ಶರಣಪ್ಪ ತುಮರಿಕೊಪ್ಪ ತಿಳಿಸಿದರು.

ಮೇಣೆಧಾಳ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಿಬ್ಬಂದಿ, ಎಸ್‌ಡಿಎಂಸಿ ಸಹಯೋಗದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮನೆ ಮನೆ ಭೇಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ADVERTISEMENT

ನಂತರ ಗ್ರಾಮದ ಎಲ್ಲ ಮನೆಗಳಿಗೆ ಭೇಟಿ ನೀಡಿ, ವಿವಿಧ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಮುಖ್ಯ ಶಿಕ್ಷಕ ಶರಣಪ್ಪ ಬಸಾಪೂರ, ಸಹ ಶಿಕ್ಷಕರಾದ ಬಸಪ್ಪ ಮೇಟಿ, ಸುಲೋಚನಾ, ಜಯಶ್ರೀ, ಸವಿತಾ, ಮಹಾಮಲ್ಲಪ್ಪ, ಹಡಗಲಿ ಶಾಲೆಯ ಮುಖ್ಯ ಶಿಕ್ಷಕ ಮಲ್ಲರಡ್ಡೆಪ್ಪ ಮತ್ತು ಪೋಷಕರು ಹಾಗೂ ಎಸ್‌ಡಿಎಂಸಿ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.