ADVERTISEMENT

ತಾವರಗೇರಾ: ಜುಮಲಾಪೂರದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭ

ಜುಮಲಾಪೂರದಲ್ಲಿ ಈಚೆಗೆ ಕಲುಷಿತ ನೀರು ಸೇವನೆಯಿಂದ ಜನರು ಅಸ್ವಸ್ಥಗೊಂಡ ಪ್ರಕರಣ ಕಂಡು ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ

​ಪ್ರಜಾವಾಣಿ ವಾರ್ತೆ
Published 7 ಜೂನ್ 2023, 13:17 IST
Last Updated 7 ಜೂನ್ 2023, 13:17 IST
ತಾವರಗೇರಾ ಸಮೀಪದ ಜುಮಲಾಪೂರ ಗ್ರಾಮದಲ್ಲಿ ಬುಧವಾರ ಮುದೇನೂರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ.
ತಾವರಗೇರಾ ಸಮೀಪದ ಜುಮಲಾಪೂರ ಗ್ರಾಮದಲ್ಲಿ ಬುಧವಾರ ಮುದೇನೂರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ.   

ತಾವರಗೇರಾ: ಸಮೀಪದ ಜುಮಲಾಪೂರದಲ್ಲಿ ಈಚೆಗೆ ಕಲುಷಿತ ನೀರು ಸೇವನೆಯಿಂದ ಜನರು ಅಸ್ವಸ್ಥಗೊಂಡ ಪ್ರಕರಣ ಕಂಡು ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯ ಸಮುದಾಯ ಭವನದಲ್ಲಿ ಬುಧವಾರ ತಾತ್ಕಾಲಿಕ ಚಿಕಿತ್ಸೆ ಕೇಂದ್ರ ವ್ಯವಸ್ಥೆ ಮಾಡಲಾಗಿದೆ.

ಗ್ರಾಮದಲ್ಲಿ ಸದ್ಯ  ತುರ್ತು ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಪ್ರಕರಣ ಹತೋಟಿಗೆ ಬಂದಿದೆ ಎಂದು ಮುದೇನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗುರುನಗೌಡ ಪಾಟೀಲ್ ಹೇಳಿದರು.

ಜುಮಲಾಪೂರ ಗ್ರಾಮ ಪಂಚಾಯಿತಿ ಪಿಡಿಒ ದೊಡ್ಡಪ್ಪ ಮಾತನಾಡಿ, ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್ ಒಳಗೆ ಕಲುಷಿತ ನೀರು ಸೇರಿದ್ದು, ಇದರಿಂದ ಜನರಲ್ಲಿ ವಾಂತಿ ಭೇದಿ ಉಂಟಾಗಿ 19 ಜನ ಅಸ್ವಸ್ಥರಾಗಿದ್ದರು. ಅವರಲ್ಲಿ ಕೆಲವರು ಗುಣಮುಖರಾಗಿದ್ದಾರೆ. ಸ್ಥಳದಲ್ಲಿ ಚಿಕಿತ್ಸೆ ನೀಡುವ ಮೂಲಕ ಆರೋಗ್ಯ ಇಲಾಖೆ ಹತೋಟಿಗೆ ಶ್ರಮಿಸುತ್ತಿದೆ. ಸ್ಥಳೀಯ ಆಡಳಿತದಿಂದ ಕಲುಷಿತ ನೀರಿನ ಪೈಪ್ ಗುರುತಿಸುವ ಕಾರ್ಯ ನಡೆದಿದೆ ಎಂದರು.

ADVERTISEMENT

ತುರ್ತು ಚಿಕಿತ್ಸಾ ಕೇಂದ್ರದಲ್ಲಿ ಗ್ರಾಮ ಪಂಚಾಯಿತಿ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಮೊಕ್ಕಾ ಹೂಡಿದ್ದು, ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿದ್ದಾರೆ.

ತಾವರಗೇರಾ ಸಮೀಪದ ಜುಮಲಾಪೂರ ಗ್ರಾಮದಲ್ಲಿ ಬುಧವಾರ ಮುದೇನೂರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ.
ತಾವರಗೇರಾ ಸಮೀಪದ ಜುಮಲಾಪೂರ ಗ್ರಾಮದಲ್ಲಿ ಬುಧವಾರ ಮುದೇನೂರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.