ADVERTISEMENT

ತಾವರಗೇರಾ: ಇ ತಂತ್ರಾಂಶ ಅರ್ಜಿ ಸಲ್ಲಿಸಲು ಅವಕಾಶ

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 16:10 IST
Last Updated 27 ಜೂನ್ 2025, 16:10 IST

ತಾವರಗೇರಾ: ಸ್ಥಳೀಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಇ-ತಂತ್ರಾಂಶದಲ್ಲಿ ತಮ್ಮ ತಮ್ಮ ಆಸ್ತಿ ಅರ್ಜಿಗಳನ್ನು ಸಲ್ಲಿಸಲು ಸಿಟಿಜನ್ ಮಾಡ್ಯುಲ್ ಒದಗಿಸಲಾಗಿದೆ.

ಮಾಲಿಕರು ತಮ್ಮ ಆಸ್ತಿಯ ಮತ್ತು ಖಾತೆಗಳ ಅರ್ಜಿಯನ್ನು ಕರ್ನಾಟಕ ಒನ್ ಕೇಂದ್ರಗಳಲ್ಲಿ ಸಲ್ಲಿಸಬಹುದು. ನಾಗರಿಕರ ಅರ್ಜಿಗಳನ್ನು ನೇರವಾಗಿ ಮಾಡ್ಯುಲ್, ಹೆಲ್ಪಡೆಸ್ಕ್ ಲಾಗಿನ್ ಮೂಲಕ ಸಲ್ಲಿಸಲು ಬೆಂಗಳೂರು ಪೌರಾಡಳಿತ ನಿರ್ದೇಶನಾಲಯ (ಕೆಎಂಡಿಎಸ್) ನಿರ್ದೇಶಕರು ಅವಕಾಶ ಕಲ್ಪಿಸಿದ್ದಾರೆ.

ಕಾರಣ ತಾವರಗೇರಾ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಈ ಪ್ರಕ್ರಿಯೆಗೆ ಸಹಕಾರ ನೀಡಬೇಕು ಎಂದು ಪಟ್ಪಣ ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ ಅಂಗಡಿ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.