ADVERTISEMENT

ಅಡುಗೆ ಸಿಬ್ಬಂದಿ: ತರಬೇತಿ ಕಾರ್ಯಗಾರ

​ಪ್ರಜಾವಾಣಿ ವಾರ್ತೆ
Published 6 ಜನವರಿ 2020, 10:31 IST
Last Updated 6 ಜನವರಿ 2020, 10:31 IST
ಕುಕನೂರಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ ಭಾನುವಾರ ಬಿಸಿಯೂಟ ಕಾರ್ಯಕರ್ತರಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಅಗ್ನಿ ದುರಂತಗಳು ಸಂಭವಿಸದಂತೆ ಮತ್ತು ಸಂಭವಿಸಿದಾಗ ಕೈಗೊಳ್ಳಬೇಕಾದ ತುರ್ತು ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು
ಕುಕನೂರಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ ಭಾನುವಾರ ಬಿಸಿಯೂಟ ಕಾರ್ಯಕರ್ತರಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಅಗ್ನಿ ದುರಂತಗಳು ಸಂಭವಿಸದಂತೆ ಮತ್ತು ಸಂಭವಿಸಿದಾಗ ಕೈಗೊಳ್ಳಬೇಕಾದ ತುರ್ತು ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು   

ಕುಕನೂರು: ಬಿಸಿಯೂಟ ತಯಾರಿಕೆಯಲ್ಲಿ ಅಡುಗೆ ಸಿಬ್ಬಂದಿ ಸ್ವಚ್ಛತೆ ಮತ್ತು ಗುಣಮಟ್ಟಕ್ಕೆ ಒತ್ತು ನೀಡಬೇಕು ಎಂದು ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಪ್.ಎಂ.ಕಳ್ಳಿ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಭಾನುವಾರ ಬಿಸಿಯೂಟ ಕಾರ್ಯಕರ್ತರಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಬಿಸಿಯೂಟ ತಯಾರಿಕೆಯಲ್ಲಿ ಗುಣಮಟ್ಟ ಮತ್ತು ಸ್ವಚ್ಛತೆಯಲ್ಲಿ ಯಾವುದೇ ಕಾರಣಕ್ಕೂ ರಾಜಿ ನಡೆಯುವುದಿಲ್ಲ. ಬಿಸಿಯೂಟದ ಹಿಂದೆ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡಬೇಕೆಂಬ ಉದ್ದೇಶವಿದ್ದು, ಯಾವುದೇ ಕಾರಣಕ್ಕೂ ಅಡುಗೆ ಸಿಬ್ಬಂದಿ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದರು.

ADVERTISEMENT

ಸ್ವಚ್ಛತೆ ಮತ್ತು ಆರೋಗ್ಯ ಅಧಿಕಾರಿ ನಾಗೇಂದ್ರ ಮಾತ­ನಾಡಿ,‘ಶಾಲೆಗೆ ಬರುವ ಆಹಾರ ಪಡಿತರಗಳ ಗುಣಮಟ್ಟ ಪರಿಶೀಲಿಸಿ, ಗುಣಮಟ್ಟ ಖಾತರಿ ಪಡಿಸ­ಬೇಕು. ಆಹಾರ ಪದಾ­ರ್ಥಗಳು, ತರಕಾರಿಗಳನ್ನು ಬಳಸಿಕೊ­ಳ್ಳುವ ಮುನ್ನ ಅವುಗಳ ಸ್ವಚ್ಛತೆಗೆ ಮಹತ್ವ ನೀಡಿ, ಗುಣಮಟ್ಟ ಪರಿಶೀಲಿಸಿದ ಬಳಿಕವೇ ಬಳಸಬೇಕು, ಅಡುಗೆ ಸಿಬ್ಬಂದಿ ಒಂದು ಕ್ಷಣ ಕರ್ತವ್ಯದಲ್ಲಿ ಲೋಪವೆಸಗಿದರೆ, ಅದರ ಪರಿಣಾಮ ವಿದ್ಯಾರ್ಥಿಗಳ ಮೇಲೆ ಬೀರುವುದರಿಂದ ಜಾಗ್ರತೆ ವಹಿಸಬೇಕು’ ಎಂದರು.

ಸರ್ಕಾರಿ ಶಾಲೆಗಳಲ್ಲಿ ಅಡುಗೆ ಕೆಲಸದಲ್ಲಿ ನಿರತರಾಗಿರುವ ಸಿಬ್ಬಂದಿ ಅದನ್ನು ಸೇವೆ ಎಂದು ಪರಿಗಣಿಸಿ ಅರ್ಪಣಾಭಾವದಿಂದ ದುಡಿಯಬೇಕು ಎಂದರು.

ಅಗ್ನಿಶಾಮಕ ದಳದ ಅಧಿಕಾರಿ ಸಂಗಪ್ಪ ಅಗ್ನಿ ದುರಂತಗಳು ಸಂಭವಿಸದಂತೆ ಮತ್ತು ಸಂಭವಿಸಿದಾಗ ಕೈಗೊಳ್ಳಬೇಕಾದ ತುರ್ತು ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಮಿಕ ಇಲಾಖೆಯ ಅಧಿಕಾರಿಗಳು ಅಡುಗೆ ಸಿಬ್ಬಂದಿ ಕೈಗೊಳ್ಳಬಹುದಾದ ಹಣ ಉಳಿತಾಯದ ಬಗ್ಗೆ ಮಾಹಿತಿ ನೀಡಿದರು.

ಮುಖ್ಯಶಿಕ್ಷಕ ಎ.ಎಚ್ ಮುತ್ತಣ್ಣ, ಅಶೋಕ ಪತ್ತಾರ, ಬಸನಗೌಡ ನಾಡಗೌಡ್ರ, ಶರಣಗೌಡ್ರ ಪಾಟೀಲ, ಬಸವರಾಜ, ಚನ್ನಬಸಯ್ಯ, ಅಹ್ಮದ್. ತಾಲ್ಲೂಕಿನ ವಿವಿಧೆಡೆಯ ಅಡುಗೆ ಸಿಬ್ಬಂದಿ ಕಾರ್ಯಗಾರದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.