ಕುಕನೂರು: ‘ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಪಾತ್ರ ಹಿರಿದು’ ಎಂದು ಪಿಎಸ್‌ಐ ಗುರುರಾಜ್.ಟಿ ಹೇಳಿದರು.
ತಾಲ್ಲೂಕಿನ ತಿಪ್ಪರಸನಾಳದಲ್ಲಿರುವ ಮುರಾರ್ಜಿ ಅಲ್ಪಸಂಖ್ಯಾತ ವಸತಿ ಕಾಲೇಜಿನಲ್ಲಿ ಕಾರ್ಯನಿರತ ಪತ್ರಕರ್ತ ದ್ವನಿ ಸಂಘದಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಇಂದು ಸಾಮಾಜಿಕ ಜಾಲತಾಣ ಸೇರಿದಂತೆ ಎಐ ತಂತ್ರಜ್ಞಾನದಿಂದ ಕೆಲವು ಅಡ್ಡ ಪರಿಣಾಮಗಳು ಉಂಟಾಗುತ್ತಿವೆ. ಮುಖ್ಯವಾಗಿ ಮಹಿಳೆಯರನ್ನು ಗುರಿಯಾಗಿಸಿ ಎಐ ತಂತ್ರಜ್ಞಾನ ದುರ್ಬಳಕೆ ಮಾಡಲಾಗುತ್ತಿದೆ. ಹೀಗಾಗಿ ಯುವತಿಯರು ತಮ್ಮ, ಫೋಟೊ, ಮೊಬೈಲ್ ಸಂಖ್ಯೆ ಸೇರಿದಂತೆ ಇತರ ವೈಯಕ್ತಿಕ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವಾಗ ಎಚ್ಚರ ವಹಿಸಬೇಕು’ ಎಂದರು.
ತಾಲ್ಲೂಕು ಪಂಚಾಯಿತಿ ಇಒ ಸಂತೋಷ ಬಿರಾದಾರ ಮಾತನಾಡಿ, ‘ಸ್ವಾಸ್ತ್ಯ ಸಮಾಜ ಕಟ್ಟುವಲ್ಲಿ ಪತ್ರಿಕೆ ಮತ್ತು ಪತ್ರಕರ್ತರ ಪಾತ್ರ ದೊಡ್ಡದು. ಸದೃಢ ಸಮಾಜ ನಿರ್ಮಾಣದಲ್ಲಿ ಮಾಧ್ಯಮ ರಂಗವು ಮುಂಚೂಣಿಯಾಗಿ ಕಾರ್ಯನಿರ್ವಹಿಸುತ್ತಿದೆ. ಯುವತಿಯರು ಓದುವ ಅಭಿರುಚಿ ಬೆಳಸಿಕೊಳ್ಳಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೆಚ್ಚು ಜ್ಞಾನ ಸಂಪಾದಿಸಿ, ದೇಶ ಸೇವೆಯ ಕಾರ್ಯಕ್ಕೆ ಅಣಿಯಾಗಬೇಕು’ ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ನರಸಿಂಹ ಗುಂಜನಹಳ್ಳಿ ಉಪನ್ಯಾಸ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್‌ಗೌಡ ಪಾಟೀಲ್, ಕೃಷ್ಣಮೂರ್ತಿ ಗದಾರಿ, ಜಿಲ್ಲಾ ಘಟಕದ ಅಧ್ಯಕ್ಷ ಸುನಿಲ್ ಮಠದ, ತಾಲ್ಲೂಕು ಅಧ್ಯಕ್ಷ ಚಂದ್ರು ಬನಾಪುರ, ಮಹೇಶ್ ಕಲ್ಮಠ, ಈರಯ್ಯ ಕುರ್ತಕೋಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.