ADVERTISEMENT

ಹುಲಿಗಿ: ವಿದ್ಯಾರ್ಥಿಗಳಿಗೆ ಸ್ವಾಗತ

​ಪ್ರಜಾವಾಣಿ ವಾರ್ತೆ
Published 29 ಮೇ 2025, 14:36 IST
Last Updated 29 ಮೇ 2025, 14:36 IST
ಮುನಿರಾಬಾದ್ ಸಮೀಪ ಹುಲಿಗಿಯ ಅನುದಾನಿತ ತುಂಗಭದ್ರಾ ಪ್ರೌಢಶಾಲೆಯಲ್ಲಿ ಶಾಲಾ ಆರಂಭೋತ್ಸವ ಗುರುವಾರ ನಡೆಯಿತು
ಮುನಿರಾಬಾದ್ ಸಮೀಪ ಹುಲಿಗಿಯ ಅನುದಾನಿತ ತುಂಗಭದ್ರಾ ಪ್ರೌಢಶಾಲೆಯಲ್ಲಿ ಶಾಲಾ ಆರಂಭೋತ್ಸವ ಗುರುವಾರ ನಡೆಯಿತು   

ಮುನಿರಾಬಾದ್: ಶಾಲಾ ಆವರಣ ಶುಚಿಗೊಳಿಸಿ, ರಂಗೋಲಿ ಹಾಕಿ, ಪುಷ್ಪ ನೀಡುವ ಮೂಲಕ ಹುಲಿಗಿಯ ಅನುದಾನಿತ ತುಂಗಭದ್ರಾ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಗುರುವಾರ ಸ್ವಾಗತಿಸಲಾಯಿತು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆದೇಶದಂತೆ ಗುರುವಾರ ಶಾಲೆಯಲ್ಲಿ ಹಬ್ಬದ ವಾತಾವರಣ ಉಂಟಾಗಿತ್ತು.

ಶಾಲಾ ಆವರಣದಲ್ಲಿ ರಂಗೋಲಿ ಬಿಡಿಸಿ ಜೊತೆಗೆ ವ್ಯಕ್ತಿತ್ವ ವಿಕಸನದ ಬಗ್ಗೆ ಉಕ್ತಿಗಳನ್ನು ಬರೆಯಲಾಗಿತ್ತು. ಮೊದಲ ದಿನ ಶಾಲೆಗೆ ಬಂದ ವಿದ್ಯಾರ್ಥಿಗಳನ್ನು ಶಿಕ್ಷಕರು ಮತ್ತು ಸಿಬ್ಬಂದಿ ಆತ್ಮೀಯವಾಗಿ ಬರಮಾಡಿಕೊಂಡರು.

ADVERTISEMENT

ವಿದ್ಯಾರ್ಥಿಗಳಿಗೆ ಸಿಹಿಹಂಚಿ ಶಿಕ್ಷಕರು ಮತ್ತು ಸಿಬ್ಬಂದಿ ಸಂಭ್ರಮಿಸಿದರು. ಮುಖ್ಯ ಶಿಕ್ಷಕ ರಾಜೇಶ್ ಪೂಜಾರ, ಕನ್ನಡ ಪಂಡಿತ ಎಸ್.ಎಂ. ರೇವಣಸಿದ್ದಯ್ಯ, ದೈಹಿಕ ಶಿಕ್ಷಣ ಶಿಕ್ಷಕಿ ಜಯಶ್ರೀ ಚನ್ನಪ್ಪ ಗೌಡ, ಸಿಬ್ಬಂದಿ ವೀರೇಶ್ ಸೋನಾರ, ವಿದ್ಯಾರ್ಥಿಗಳು ಹಾಗೂ ಬಿಸಿಯೂಟದ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.