ಮುನಿರಾಬಾದ್ (ಕೊಪ್ಪಳ ಜಿಲ್ಲೆ): ಇಲ್ಲಿನ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ತುಂಗಭದ್ರಾ ಸೇತುವೆಯ ಮೇಲಿಂದ ಕಬ್ಬಿಣದ ಅದಿರು ಸಾಗಿಸುವ ಖಾಲಿ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆ ದಾಟಿಕೊಂಡು ಮಂಗಳವಾರ ನದಿಗೆ ಉರುಳಿದೆ.
ನದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿಯುತ್ತಿರುವ ಪರಿಣಾಮ ಟಿಪ್ಪರ್ ಮಾತ್ರ ಜಖಂಗೊಂಡಿದ್ದು, ಚಾಲಕ ನದಿಯಲ್ಲಿ ಈಜಿ ದಡ ಸೇರಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮಂಗಳವಾರ ಸಂಜೆ ಮುನಿರಾಬಾದ್ ಪೊಲೀಸರು ಮತ್ತು ಸ್ಥಳೀಯರ ನೆರವಿನಿಂದ ಕ್ರೇನ್ ಮೂಲಕ ಟಿಪ್ಪರ್ ನದಿಯಿಂದ ಹೊರತೆಗೆಯಲಾಗಿದೆ. ಟಿಪ್ಪರ್ ಚಾಲಕ ದಾವಲ್ ಸಾಬ್ ಪ್ರಾಣಾಪಾಯದಿಂದ ಪಾರಾಗಿದ್ದು, ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.