ವಿಧಾನಸೌಧ
ಕೊಪ್ಪಳ: ಜಿಲ್ಲೆಯ ತುಂಗಭದ್ರಾ ಜಲಾಶಯದಲ್ಲಿ ಮುಂಗಾರು ಹಂಗಾಮಿಗೆ ಲಭ್ಯವಿರುವ ನೀರು ಹಂಚಿಕೆ ಮಾಡುವ ಸಲುವಾಗಿ ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ 124ನೇ ನೀರಾವರಿ ಸಲಹಾ ಸಮಿತಿ ಸಭೆ ಜೂ. 27ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದೆ.
ಸಮಿತಿಯ ಅಧ್ಯಕ್ಷರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸಭೆಯ ಅಧ್ಯಕ್ಷತೆ ವಹಿಸುವರು. ಜಲಾಶಯ ವ್ಯಾಪ್ತಿಯ ಕೊಪ್ಪಳ, ವಿಜಯನಗರ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.