ADVERTISEMENT

ಸಾಹಿತ್ಯ ಗೊಂಡಬಾಳಗೆ ಎರಡು ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2024, 15:24 IST
Last Updated 6 ಸೆಪ್ಟೆಂಬರ್ 2024, 15:24 IST
ಕ್ರೀಡಾಕೂಟದಲ್ಲಿ ಪ್ರಶಸ್ತಿ ಪಡೆದ ಸಾಹಿತ್ಯ ಎಂ. ಗೊಂಡಬಾಳಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ ಪ್ರಶಸ್ತಿ ಪ್ರದಾನ ಮಾಡಿದರು
ಕ್ರೀಡಾಕೂಟದಲ್ಲಿ ಪ್ರಶಸ್ತಿ ಪಡೆದ ಸಾಹಿತ್ಯ ಎಂ. ಗೊಂಡಬಾಳಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ ಪ್ರಶಸ್ತಿ ಪ್ರದಾನ ಮಾಡಿದರು   

ಕೊಪ್ಪಳ: ಬಳ್ಳಾರಿಯ ಚೈತನ್ಯ ಗ್ರೂಪ್‍ನ ಇಲ್ಲಿನ ಚೈತನ್ಯ ಪಿಯು ಕಾಲೇಜಿನ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಾಹಿತ್ಯ ಎಂ. ಗೊಂಡಬಾಳ ಪಿಯು ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಎರಡು ಪದಕಗಳನ್ನು ಗೆದ್ದುಕೊಂಡಿದ್ದಾಳೆ.

ಕರಾಟೆಯ ಕುಮಿತೆ 56 ಕೆ.ಜಿ. ವಿಭಾಗ ಮತ್ತು ಜಂಪ್‌ರೋಪ್‌ನ 30 ಸೆಕೆಂಡ್ಸ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ, ರಾಷ್ಟ್ರೀಯ ಸಿಲಾತ್ ತರಬೇತುದಾರ ರಜಾಕ್ ಹುಸೇನ್ ಹನುಮಸಾಗರ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ತಿರುಪತಿ ನಾಯಕ, ಮಲ್ಲಪ್ಪ, ಅಂಬರೀಶ ಇತರರು ಬಹುಮಾನ ಪಾರಿತೋಷಕ ವಿತರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.