
ಪ್ರಜಾವಾಣಿ ವಾರ್ತೆ
ಕೊಪ್ಪಳ: ತಾಲ್ಲೂಕಿನ ಗುಳದಳ್ಳಿ ಸಮೀಪ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಮೃತ ಯುವಕರನ್ನು ಮುನಿರಾಬಾದ್ ನಿವಾಸಿಗಳಾದ ವಸಂತಕುಮಾರ್ (29), ವಿಜಯಕುಮಾರ್ (23) ಎಂದು ಗುರುತಿಸಲಾಗಿದೆ.
ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿ ಎಸ್ ಐ ಸುಪ್ರೀತ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.