ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಗುರುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಯಂಕಪ್ಪ ತಳವಾರ (60), ಪಾಷವಲಿಸಾಬ ಮಾಳಿಗದ್ದಿ (22) ಮೃತಪಟ್ಟವರು.
ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಕಲ್ಲು ತೂರಾಟ ಕೂಡ ನಡೆದಿದ್ದು, ಘಟನೆಗೆ ನಿರ್ದಿಷ್ಟ ಕಾರಣ ಗೊತ್ತಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.