ADVERTISEMENT

ತುರ್ತಾಗಿ ನೀರಾವರಿ ಸಲಹಾ ಸಮಿತಿ ಸಭೆ ಕರೆಯಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ಜುಲೈ 2023, 12:48 IST
Last Updated 27 ಜುಲೈ 2023, 12:48 IST
   

ಕೊಪ್ಪಳ: ‘ತುಂಗಭದ್ರಾ ಜಲಾಶಯಕ್ಕೆ ನೀರಿನ ಒಳಹರಿವು ಉತ್ತಮವಾಗಿದ್ದು ಸರ್ಕಾರ ತುರ್ತಾಗಿ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ಕರೆದು ಕಾಲುವೆಗಳಿಗೆ ನೀರು ಹರಿಸಬೇಕು’ ಎಂದು ಕೃಷಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಬಿಲ್ಗಾರ ಆಗ್ರಹಿಸಿದರು.

‘ಸಕಾಲದಲ್ಲಿ ನೀರು ಬಿಡದಿದ್ದರೆ ಭತ್ತದ ಬೆಳೆಗೆ ಉತ್ತಮ ಇಳುವರಿ ಬರುವುದಿಲ್ಲ. ತ್ವರಿತವಾಗಿ ನೀರು ಬಿಡುಗಡೆ ಮಾಡಿ ಕೊಪ್ಪಳ, ರಾಯಚೂರು ಜಿಲ್ಲೆಗಳ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಈ ಕುರಿತು ಚರ್ಚಿಸಿ ಆದಷ್ಟು ಬೇಗನೆ ತೀರ್ಮಾನ ಕೈಗೊಳ್ಳಬೇಕು ಎಂದು ಕೊಪ್ಪಳ, ರಾಯಚೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರಿಗೆ ಮುಖ್ಯಮಂತ್ರಿ ಸೂಚಿಸಬೇಕು’ ಎಂದು ಗುರುವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

‘ಕೆಲ ಭಾಗದಲ್ಲಿ ಕಾಲುವೆ ನಿರ್ವಹಣಾ ಕೆಲಸ ನಡೆಯುತ್ತಿದ್ದು, ಅದನ್ನು ಸ್ಥಗಿತಗೊಳಿಸಿ ಜು. 29ರಂದು ಕಾಲುವೆಗಳಿಗೆ ನೀರು ಹರಿಸಬೇಕು’ ಎಂದು ಸರ್ಕಾರವನ್ನು ಒತ್ತಾಯಿಸಿದರು.

ADVERTISEMENT

ಸಂಘಟನೆಯ ರಾಜ್ಯ ಗೌರವಾಧ್ಯಕ್ಷ ಕುಪೇಂದ್ರ ನಾಯಕ, ರಾಜ್ಯ ಉಪಾಧ್ಯಕ್ಷ ಈರಪ್ಪ ಕೆ., ಕಲ್ಯಾಣ ಕರ್ನಾಟಕ ವಿಭಾಗದ ಅಧ್ಯಕ್ಷ ಹನುಮಂತಪ್ಪ ಹಂಚಿನಾಳಕ್ಯಾಂಪ್‌, ಮುಖಂಡರಾದ ಈರಪ್ಪ ಕುರಿ, ಮೋಹನ ಕುರಿ, ಶಂಕ್ರಪ್ಪ ವಜ್ರಬಂಡಿ ಹಾಗೂ ಮಲ್ಲಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.