ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಹೇರಳವಾಗಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ನಿಯೋಗ ಮಂಗಳವಾರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ ಅವರಿಗೆ ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿತು.
ಬಳಿಕ ಮಾತನಾಡಿದ ಬಿಜೆಪಿ ನಾಯಕರು, ಕೂಡಲೇ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಿ. ಹಲವು ತಿಂಗಳಿಂದ ಅಳವಂಡಿ ಹೋಬಳಿ, ಕಿನ್ನಾಳ, ಓಜನಹಳ್ಳಿ ಸೇರಿದಂತೆ ವಿವಿಧೆಡೆ ವ್ಯಾಪಕವಾಗಿ ಅಕ್ರಮವಾಗಿ ಮರಳನ್ನು ಸಾಗಾಟ ಮಾಡಲಾಗುತ್ತಿದೆ. ಹಿರೇಸಿಂಧೋಗಿ ಬಳಿ ಈಚೆಗೆ ದಾಳೆ ನಡೆಸಿ, ಅಕ್ರಮ ಮರಳನ್ನು ವಶಪಡಿಸಿಕೊಂಡಿರುವುದು ಸ್ವಾಗತಾರ್ಹ. ಇದೇ ರೀತಿ ಉಳಿದ ಕಡೆ ದಾಳಿ ನಡೆಸಿ ದಂಧೆಕೋರರಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಶ ಬಸವರಾಜ ದಢೇಸೂಗೂರು, ರಾಜ್ಯಕಾರ್ಯಕಾರಿಣಿ ಸದಸ್ಯರ ಡಾ. ಬಸವರಾಜ್ ಕ್ಯಾವಟರ್, ಪ್ರಮುಖ ಚಂದ್ರಶೇಖರ ಕವಲೂರ, ಕೊಪ್ಪಳ ಗ್ರಾಮೀಣ ಮಂಡಲ ಅಧ್ಯಕ್ಷ ಪ್ರದೀಪ್ ಹಿಟ್ನಾಳ್, ನಗರ ಮಂಡಲ ಅಧ್ಯಕ್ಷ ರಮೇಶ ಕವಲೂರ, ಎಸ್. ಸಿ. ಮೋರ್ಚಾ ಜಿಲ್ಲಾ ಅಧ್ಯಕ್ಷ ಗಣೇಶ ಹೊರತಟ್ನಾಳ್, ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್ ಹೆಸರೂರ್, ಉಮೇಶ್ ಹಿರೇಮಠ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ವಾಣಿಶ್ರೀ ಹಿರೇಮಠ, ಕೀರ್ತಿ ಪಾಟೀಲ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.