ADVERTISEMENT

ಲೋಕ ಅದಾಲತ್ ಪ್ರಯೋಜನ ಪಡೆಯಿರಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ವಿಜಯಲಕ್ಷ್ಮಿ ದೇವಿ ಮನವಿ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 11:56 IST
Last Updated 9 ಆಗಸ್ಟ್ 2021, 11:56 IST
ಗಂಗಾವತಿ ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ವಿಜಯಲಕ್ಷ್ಮಿ ದೇವಿ ಮಾತನಾಡಿದರು
ಗಂಗಾವತಿ ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ವಿಜಯಲಕ್ಷ್ಮಿ ದೇವಿ ಮಾತನಾಡಿದರು   

ಗಂಗಾವತಿ: ‘ಆ. 14 ರಂದು ಮೆಗಾ ಇ–ಲೋಕ ಅದಾಲತ್ ನಡೆಯಲಿದೆ. ಕಕ್ಷಿದಾರರು ಇದರ ಉಪಯೋಗ ಪಡೆದುಕೊಳ್ಳಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ವಿಜಯಲಕ್ಷ್ಮಿ ದೇವಿ ಹೇಳಿದರು.

ಇಲ್ಲಿನ ನ್ಯಾಯಾಲಯ ಸಂಕೀರ್ಣದಲ್ಲಿ ಈಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಲೋಕ ಅದಾಲತ್‌ನಲ್ಲಿ ಸೌಹಾರ್ದಯುತವಾಗಿ ಪ್ರಕರಣಗಳನ್ನು ಬಗೆಹರಿಸಲು ಸಾಧ್ಯವಿದೆ. ಹಣ, ಸಮಯ ಉಳಿಯುತ್ತದೆ ಎಂದರು.

ADVERTISEMENT

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವೇಂದ್ರ ಪಂಡಿತ್ ಮಾತನಾಡಿ,‘ವಾಹನ, ಚೆಕ್ ಬೌನ್ಸ್, ವಿದ್ಯುತ್ ಕಳ್ಳತನ ಹಾಗೂ ಕುಟುಂಬ ಕಲಹದಂಥ ಪ್ರಕರಣಗಳನ್ನು ಸಂಧಾನದ ಮೂಲಕ ಪರಿಹರಿಸಲಾಗುತ್ತದೆ’ ಎಂದು ಹೇಳಿದರು.

ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾದಿ, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಎಂ.ಜಿ. ಶಿವಳ್ಳಿ, ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಬಿ.ನಾಗರಾಜ, ಪ್ರಧಾನ ದಿವಾಣಿ ನ್ಯಾಯಾಧೀಶ ವಿಶ್ವನಾಥ ಮೂಗುತಿ, ಗೌರಮ್ಮ, ವಕೀಲರ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ಬಿ.ಪ್ರಭು, ವಕೀಲರಾದ ಎಚ್.ಸಿ.ಯಾದವ ಹಾಗೂ ವಿರುಪಾಕ್ಷಪ್ಪ ಭಾವಿಕಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.