ADVERTISEMENT

‘ಮಹಿಳೆಯರು ನರೇಗಾ ಸದುಪಯೋಗ ಪಡೆಯಿರಿ’

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 12:14 IST
Last Updated 19 ಜನವರಿ 2021, 12:14 IST
ಗಂಗಾವತಿ ತಾಲ್ಲೂಕಿನ ಕೇಸರಹಟ್ಟಿ ಗ್ರಾಮದಲ್ಲಿ ಮಹಿಳಾ ಕಾಯಕೋತ್ಸವಕ್ಕೆ ಮಂಗಳವಾರ ಚಾಲನೆ ನೀಡಲಾಯಿತು
ಗಂಗಾವತಿ ತಾಲ್ಲೂಕಿನ ಕೇಸರಹಟ್ಟಿ ಗ್ರಾಮದಲ್ಲಿ ಮಹಿಳಾ ಕಾಯಕೋತ್ಸವಕ್ಕೆ ಮಂಗಳವಾರ ಚಾಲನೆ ನೀಡಲಾಯಿತು   

ಗಂಗಾವತಿ: ‘ನರೇಗಾ ಯೋಜನೆಯಲ್ಲಿ ಒಂದು ವರ್ಷದಲ್ಲಿ 100 ದಿನ ಕೆಲಸ ಮಾಡಲು ಅವಕಾಶ ಇದೆ. ಮಹಿಳೆಯರು ಇದರ ಸದುಪಯೋಗ ಪಡೆಯಬೇಕು’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣ ಎಚ್. ಹೇಳಿದರು.

ತಾಲ್ಲೂಕಿನ ಕೇಸರಹಟ್ಟಿ ಗ್ರಾಮದಲ್ಲಿ ನಡೆದ ಮಹಿಳಾ ಕಾಯಕೋತ್ಸವ ಸಮೀಕ್ಷಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ಮಹಿಳಾ ಕಾಯಕೋತ್ಸವ ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಜ.15 ರಿಂದ ಮಾ.15 ರವರೆಗೆ ಅಭಿಯಾನ ನಡೆಯಲಿದೆ’ ಎಂದು ತಿಳಿಸಿದರು.

ADVERTISEMENT

‘ಮಹಿಳೆಯರು ಹಾಗೂ ಪುರುಷರಿಗೆ ಸಮಾನ ಕೂಲಿ ನೀಡಲಾಗುತ್ತಿದೆ. ವರ್ಷದಲ್ಲಿ 100 ದಿನ ಕೆಲಸ ಮಾಡಿದರೆ ₹28,500 ಪಡೆಯಬಹುದು’ ಎಂದರು.

ತಾಲ್ಲೂಕು ಎಂಐಎಸ್ ಸಂಯೋಜಕ ಬಸವರಾಜ ತೋಟದ್, ಐಇಸಿ ಸಂಯೋಜಕ ಬಾಳಪ್ಪ ತಾಳಕೇರಿ, ಗ್ರಾ.ಪಂ. ಸಿಬ್ಬಂದಿ ಪುಷ್ಪಲತಾ, ಶರಣಪ್ಪ, ಸುಬಾನಿ, ಈರಣ್ಣ, ಬಸಮ್ಮ ಹಾಗೂ ಎನ್.ಎಲ್.ಆರ್.ಎಂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.