ADVERTISEMENT

ಬೀದಿಬದಿ ವ್ಯಾಪಾರಿಗಳಿಗೆ ಕೋವಿಡ್ ಲಸಿಕೆ

​ಪ್ರಜಾವಾಣಿ ವಾರ್ತೆ
Published 28 ಮೇ 2021, 14:55 IST
Last Updated 28 ಮೇ 2021, 14:55 IST
ಯಲಬುರ್ಗಾ ಪಟ್ಟಣ ಪಂಚಾಯಿತಿ ಆವರಣದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಕೋವಿಡ್ ಲಸಿಕೆ ನೀಡಲಾಯಿತು
ಯಲಬುರ್ಗಾ ಪಟ್ಟಣ ಪಂಚಾಯಿತಿ ಆವರಣದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಕೋವಿಡ್ ಲಸಿಕೆ ನೀಡಲಾಯಿತು   

ಯಲಬುರ್ಗಾ: ಇಲ್ಲಿಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ಕೋವಿಡ್ ಲಸಿಕೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಿ.ವಿ. ಕುಲಕರ್ಣಿ ಮಾತನಾಡಿ,‘ತೀವ್ರವಾಗಿ ಹರಡುತ್ತಿರುವ ಕೊರೊನಾ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಜಾಗೃತರಾಗುವುದರ ಜತೆಗೆ ಸರ್ಕಾರದ ಕಾರ್ಯಕ್ರಮಗಳಿಗೆ ಸಹಕರಿಸಬೇಕಾಗಿದೆ. ಕೆಲವರು ಲಸಿಕೆ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಅವರಿಗೆ ಈ ಬಗ್ಗೆ ಸರಿಯಾದ ಮಾಹಿತಿಯಿಲ್ಲ. ಯಾವುದೇ ಅಡ್ಡಪರಿಣಾಮವಿಲ್ಲದ ಕಾರಣ ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಸಿಬ್ಬಂದಿ ಶಿವಕುಮಾರ ಮಾತನಾಡಿ,‘ಪ್ರತಿನಿತ್ಯ ಜನಸಾಮಾನ್ಯರೊಂದಿಗೆ ಬೆರೆಯುವ ಬೀದಿಬದಿ ವ್ಯಾಪಾರಿಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವುದು ಮುಖ್ಯ’ ಎಂದರು.

ADVERTISEMENT

ವೆಂಕಣ್ಣ ಜೋಶಿ, ಭಾರತಿ, ಬಸಲಿಂಗಪ್ಪ ಭಾಸ್ಕರ, ರೇಣುಕಪ್ಪ ಹಾಗೂ ರವೀಂದ್ರ ತಾಳಿಕೋಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.