ADVERTISEMENT

ಕೊಪ್ಪಳ: ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪನೆ, ಸಾಮೂಹಿಕ ವಿವಾಹ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2022, 3:00 IST
Last Updated 27 ನವೆಂಬರ್ 2022, 3:00 IST
ಮಹರ್ಷಿ ವಾಲ್ಮೀಕಿ ಮೂರ್ತಿ
ಮಹರ್ಷಿ ವಾಲ್ಮೀಕಿ ಮೂರ್ತಿ   

ಕೊಪ್ಪಳ: ತಾಲ್ಲೂಕಿನ ತಿಗರಿ ಗ್ರಾಮದಲ್ಲಿ ನ. 28ರಂದು ನೂತನ ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿವಿಧ ಸಮಾಜಗಳ 12 ಜೋಡಿಯ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಜರುಗಲಿವೆ.

ಕೊಪ್ಪಳ ತಾಲ್ಲೂಕು ಮಹರ್ಷಿ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಮುಖಂಡ ಭೀಮನಗೌಡ ಪೊಲೀಸ್‌ ಪಾಟೀಲ್‌ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಈಗಾಗಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, 28ರಂದು ಪ್ರಮುಖ ಕಾರ್ಯಕ್ರಮ ಜರುಗಲಿದೆ. ಅಂದು ಸಚಿವ ಬಿ. ಶ್ರೀರಾಮುಲು ಬರಲಿದ್ದಾರೆ’ ಎಂದು ತಿಳಿಸಿದರು.

ಅಂದು ಬೆಳಿಗ್ಗೆ ಮೂರ್ತಿ ಪ್ರತಿಷ್ಠಾಪನೆ, ಹೋಮ ಹವನ, 11.30ಕ್ಕೆ ಸಾಮೂಹಿಕ ವಿವಾಹ ಜರುಗಲಿವೆ. ಶಿಲ್ಪಕಲಾ ಅಕಾಡೆಮಿ ಪ್ರಶಸ್ತಿ ಬಿ. ಮೌನೇಶ ಆಚಾರ್ಯರು ವಾಲ್ಮೀಕಿ ಮೂರ್ತಿ ನಿರ್ಮಿಸಿದ್ದಾರೆ.

ADVERTISEMENT

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಶಿರಹಟ್ಟಿ ಸಂಸ್ಥಾನಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಶಿರಹಟ್ಟಿ ಸಂಸ್ಥಾನಮಠದ ಫಕೀರಸಿದ್ದರಾಮ ಸ್ವಾಮೀಜಿ ಮತ್ತು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.

ವಾಲ್ಮೀಕಿ ಮಹಾಸಭಾ ರಾಜ್ಯ ಸಂಘಟನಾ ಕಾರ್ಯದರ್ಶಿ ಸುರೇಶ ಡೊಣ್ಣಿ, ತಾಲ್ಲೂಕು ಘಟಕದ ಅಧ್ಯಕ್ಷ ಶರಣಪ್ಪ ಎಚ್‌. ನಾಯಕ, ತಿಗರಿ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ ಪೂಜಾರ, ಮುದಿಯಪ್ಪ ಅಡವಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.