
ಅಳವಂಡಿ: ಸಮೀಪದ ನಿಲೋಗಿಪುರ ಗ್ರಾಮದಲ್ಲಿ ವಾಲ್ಮೀಕಿ ಸೇವಾ ಸಮಿತಿ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಗ್ರಾಮದ ವಾಲ್ಮೀಕಿ ಸಮುದಾಯ ಭವನದಲ್ಲಿ ವಾಲ್ಮೀಕಿ ಮಹರ್ಷಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ವಾಲ್ಮೀಕಿ ಸೇವಾ ಸಮಿತಿ ವತಿಯಿಂದ ಎಸ್‌ಎಸ್ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಅಶ್ವಿನಿ ನಿಂಗಾಪುರ, ಕೌಶಲ್ಯ ಕೇಸಲಾಪುರಗೆ ಪ್ರತಿಭಾ ಪುರಸ್ಕಾರ ಮಾಡಿ, ಸನ್ಮಾನಿಸಲಾಯಿತು.
ಪ್ರಮುಖರಾದ ಪ್ರದೀಪಗೌಡ ಮಾಲಿಪಾಟೀಲ, ಭರಮಪ್ಪ ನಗರ, ಕನಕನಗೌಡ ಪೋಲಿಸಪಾಟೀಲ, ಹನುಮಪ್ಪ ಕೇಸಲಾಪುರ, ಲಕ್ಷಣ ನಿಂಗಾಪುರ, ತೋಟಪ್ಪ, ಹೊನ್ನಪ್ಪಗೌಡ, ಪರಶುರಾಮ, ಭೀಮಶೆಪ್ಪ, ಗುರುಬಸವರಾಜ, ಶಿವಪ್ಪ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.