ಕೊಪ್ಪಳ: ‘ಜಿಲ್ಲೆಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲು ಸಂಚಾರ ಸೇರಿ ಜಿಲ್ಲೆಯ ರೈಲ್ವೆ ಅಭಿವೃದ್ಧಿ ಕಾಮಗಾರಿಗೆ ಕ್ರಮ ವಹಿಸಬೇಕು’ ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.
‘ಜಿಲ್ಲೆಯ ರೈಲ್ವೆ ಅಭಿವೃದ್ಧಿ ಕಾಮಗಾರಿ ಸ್ಥಿತಿಗತಿ, ಅಗತ್ಯ ಕಾಮಗಾರಿ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಕುಷ್ಟಗಿಯಲ್ಲಿ ರೈಲ್ವೆ ಹಳಿ ಹಾಕಲಾಗಿದ್ದು, ಪ್ರತಿನಿತ್ಯ ಹುಬ್ಬಳ್ಳಿ- ಕುಷ್ಟಗಿ ರೈಲು ಸಂಚಾರ ನಡೆಸಿದರೆ ಈ ಭಾಗದ ಜನತೆಗೆ ಅನುಕೂಲವಾಗಲಿದೆ. ಗಂಗಾವತಿ- ದರೋಜಿ, ಗಂಗಾವತಿ - ಬಾಗಲಕೋಟೆ ರೈಲು ಸಂಚಾರಕ್ಕೆ ಸರ್ವೆ ನಡೆಸಲಾಗಿದೆ. ಈ ಕಾಮಗಾರಿ ತ್ವರಿತವಾಗಿ ಆರಂಭಿಸಲು ಮನವಿ ಮಾಡಲಾಗಿದೆ’ ಎಂದು ಕ್ಯಾವಟರ್ ಹೇಳಿದ್ದಾರೆ.
‘ಬನ್ನಿಕೊಪ್ಪ ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಗಳಕೇರಾ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಿಸಬೇಕು. ಹುಬ್ಬಳ್ಳಿ- ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದ್ದು, ಈ ರೈಲು ಗದಗ, ಕೊಪ್ಪಳ, ಬಳ್ಳಾರಿ ಮೂಲಕ ಸಂಚರಿಸುವಂತೆ ಕ್ರಮ ವಹಿಸಬೇಕು ಎಂದು ಕೋರಿದ್ದೇನೆ. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.