ADVERTISEMENT

ಕೊಪ್ಪಳ: ಕಂಪ್ಲಿ ಸೇತುವೆ ಮೇಲೆ ವಾಹನ ಸಂಚಾರ ಪುನರಾರಂಭ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2024, 16:21 IST
Last Updated 26 ಆಗಸ್ಟ್ 2024, 16:21 IST
   

ಗಂಗಾವತಿ: ಗಂಗಾವತಿ ಹಾಗೂ ಕಂಪ್ಲಿ ನಡುವೆ ಸಂಪರ್ಕ ಕಲ್ಪಿಸುವ ಸೇತುವೆ ಮೇಲೆ ವಾಹನಗಳ ಓಡಾಟಕ್ಕೆ ಹೇರಲಾಗಿದ್ದ ನಿರ್ಬಂಧ ತೆರವು ಮಾಡಲಾಗಿದ್ದು, ಸೋಮವಾರದಿಂದ ವಾಹನಗಳ ಓಡಾಟ ಆರಂಭವಾಗಿದೆ.

ತುಂಗಭದ್ರಾ ಜಲಾಶಯ ಭರ್ತಿಯಾಗಿ ನದಿಗೆ ನೀರು ಬಿಟ್ಟಿದ್ದರಿಂದ ಹಾಗೂ ಜಲಾಶಯದ 19ನೇ ಕ್ರಸ್ಟ್‌ ಗೇಟ್ ಕೊಚ್ಚಿ ಹೋಗಿದ್ದರಿಂದ ಒಂದು ತಿಂಗಳು ಹಿಂದೆ ಸೇತುವೆ ಮೇಲೆ ವಾಹನ ಹಾಗೂ ಪಾದಚಾರಿಗಳ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿತ್ತು.

ಈ ಕುರಿತು ಗಂಗಾವತಿಯ ಲೋಕೋಪಯೋಗಿ ಇಲಾಖೆ ಎಇಇ ಜೆ.ವಿಶ್ವನಾಥ ಮಾಹಿತಿ ನೀಡಿದ್ದು ‘ಈ ಬಾರಿ ಪ್ರವಾಹದಿಂದ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದರಿಂದ ಸೇತುವೆಯ ರಕ್ಷಣಾ ಕಂಬಗಳು ಅಲ್ಲಲ್ಲಿ ಜಖಂಗೊಂಡಿದ್ದವು. ಈಗ ನೀರಿನ ಹರಿವು ಕಡಿಮೆಯಾಗಿದೆ. ಸೇತುವೆಯ ಗುಣಮಟ್ಟ ಪರಿಶೀಲಿಸಿ ಅಗತ್ಯವಿರುವ ಕಡೆ ದುರಸ್ತಿ ಮಾಡಲಾಗಿದೆ. ಸದ್ಯಕ್ಕೆ ಲಘು ವಾಹನಗಳ ಓಡಾಟಕ್ಕೆ ಮಾತ್ರ ಅನುಮತಿ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.