ADVERTISEMENT

‘ವಿರೂಪಾಕ್ಷಪ್ಪ ಬಿಜೆಪಿ ಸೇರರು’

ತ್ರಿಚಕ್ರ ವಾಹನ ಹಸ್ತಾಂತರಿಸಿದ ಶಾಸಕ ಅಮರೇಗೌಡ ಬಯ್ಯಾಪುರ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2020, 16:56 IST
Last Updated 22 ನವೆಂಬರ್ 2020, 16:56 IST
ಕುಷ್ಟಗಿಯಲ್ಲಿ ಅಂಗವಿಕಲ ಫಲಾನುಭವಿಗಳಿಗೆ ಶಾಸಕ ಅಮರೇಗೌಡ ಬಯ್ಯಾಪುರ ತ್ರಿಚಕ್ರ ವಾಹನಗಳನ್ನು ಹಸ್ತಾಂತರಿಸಿದರು
ಕುಷ್ಟಗಿಯಲ್ಲಿ ಅಂಗವಿಕಲ ಫಲಾನುಭವಿಗಳಿಗೆ ಶಾಸಕ ಅಮರೇಗೌಡ ಬಯ್ಯಾಪುರ ತ್ರಿಚಕ್ರ ವಾಹನಗಳನ್ನು ಹಸ್ತಾಂತರಿಸಿದರು   

ಕುಷ್ಟಗಿ: ‘ಬಿಜೆಪಿ ಮುಖಂಡ ವಿಜಯೇಂದ್ರ ಮತ್ತು ಮಾಜಿ ಸಂಸದ, ಕಾಂಗ್ರೆಸ್‌ ಮುಖಂಡ ಕೆ.ವಿರೂಪಾಕ್ಷಪ್ಪ ಮುಖಾಮುಖಿಯಾಗಿ ಮಾತುಕತೆ ನಡೆಸಿರುವುದು ವೈಯಕ್ತಿಕ ವಿಚಾರಕ್ಕಾಗಿ ಅದಕ್ಕೂ ರಾಜಕೀಯಕ್ಕೂ ಸಂಬಂಧವಿಲ್ಲ’ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಹೇಳಿದರು.

ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು,‘ವಿರೂಪಾಕ್ಷಪ್ಪ ಅವರ ಆರೋಗ್ಯ ವಿಚಾರಿಸುವುದಕ್ಕೆ ಬಿ.ಎಸ್‌.ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರು ಅವರ ಮನೆಗೆ ಭೇಟಿ ನೀಡಿರಬಹುದು. ಅಲ್ಲದೆ ವಿರೂಪಾಕ್ಷಪ್ಪ ಅವರು ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಹೋರಾಟ ಸಮಿತಿ ಅಧ್ಯಕ್ಷರೂ ಆಗಿದ್ದಾರೆ. ಹಾಗಾಗಿ ವಿಜಯೇಂದ್ರ ಭೇಟಿ ನೀಡಿರಬಹುದು’ ಎಂದರು.

ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಮುಖಂಡರು ಮುತುವರ್ಜಿ ವಹಿಸಿದ್ದಾರೆ. ತಮಗೂ ಕೂಡ ಪಕ್ಷ ಜವಾಬ್ದಾರಿ ವಹಿಸಿದೆ. ನ.23 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಪಕ್ಷದ ಸಂಘಟನೆ ಸಭೆಯಲ್ಲಿ ಭಾಗವಹಿಸಲಿದ್ದು, ನೂರಾರು ಜನರು ಕಾಂಗ್ರೆಸ್‌ ಪಕ್ಷ ಸೇರಲಿದ್ದಾರೆ ಎಂದು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.