
ಗಂಗಾವತಿ: ‘ಮತದಾರರು ಕಡ್ಡಾಯವಾಗಿ ಮತ ಚಲಾಯಿಸಬೇಕು’ ಎಂದು ತಾ.ಪಂ ಇಒ ರಾಮರೆಡ್ಡಿ ಪಾಟೀಲ ಹೇಳಿದರು.
ನಗರದ ತಾ.ಪಂ ಆವರಣದಲ್ಲಿ ಶುಕ್ರವಾರ ನಡೆದ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳದಿರುವ 18 ವರ್ಷ ಮೇಲ್ಪಟ್ಟ ಎಲ್ಲರೂ ಹೆಸರು ನೋಂದಾಯಿಸಿಕೊಂಡು ಮತದಾನದ ಹಕ್ಕು ಪಡೆಯಬೇಕು. ‘ನನ್ನ ಭಾರತ, ನನ್ನ ಮತ’ ಎಂಬ ಧ್ಯೇಯವಾಕ್ಯದೊಂದಿಗೆ 16ನೇ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ. ಮುಂದೆ ಗ್ರಾ.ಪಂ, ತಾ.ಪಂ ಹಾಗೂ ಜಿ.ಪಂ ಚುನಾವಣೆಗಳು ಬರಲಿದ್ದು, ಶೇ 100ರಷ್ಟು ಮತದಾನ ಆಗಬೇಕು’ ಎಂದರು.
ನಂತರ ಗುರುತಿನ ಚೀಟಿಗಳನ್ನು ನವೀಕರಣ ಮಾಡಿಕೊಳ್ಳುವ ಬಗ್ಗೆ ಸಲಹೆ ನೀಡಿ, ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ತಾ.ಪಂ ಸಹಾಯಕ ನಿರ್ದೇಶಕ ಮಹಾಂತಗೌಡ ಪಾಟೀಲ, ಗ್ರಾ.ಪಂ ಪಿಡಿಒ ಇಂದಿರಾ, ವಿದ್ಯಾವತಿ ಸೇರಿ ತಾ.ಪಂ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.