ADVERTISEMENT

ಮತದಾನ ಪ್ರಜಾ ಸಮೂಹದ ಧ್ವನಿ: ಈರಣ್ಣ ಕೊಟ್ರಣ್ಣವರ

ಶಿಕ್ಷಕ ಈರಣ್ಣ ಕೊಟ್ರಣ್ಣವರ ಅಭಿಮತ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 4:03 IST
Last Updated 26 ಜನವರಿ 2022, 4:03 IST
ಹನುಮಸಾಗರ ಸಮೀಪದ ಮನ್ನೇರಾಳ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಂಗಳವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು
ಹನುಮಸಾಗರ ಸಮೀಪದ ಮನ್ನೇರಾಳ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಂಗಳವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು   

ಹನುಮಸಾಗರ: ‘ಮತದಾನ ಎಂಬುದು ಅಖಂಡ ಪ್ರಜಾ ಸಮೂಹದ ದನಿ, ಪ್ರತಿ ಪ್ರಜೆಯೂ ತನ್ನನ್ನು ಆಳುವ ಪ್ರತಿನಿಧಿಯನ್ನು ಆಯ್ಕೆ ಮಾಡಲು ಇರುವ ವ್ಯವಸ್ಥೆಯೇ ಮತದಾನ’ ಎಂದು ಶಿಕ್ಷಕ ಈರಣ್ಣ ಕೊಟ್ರಣ್ಣವರ ಹೇಳಿದರು.

ಮಂಗಳವಾರ ಸಮೀಪದ ಮನ್ನೇರಾಳ ಸರ್ಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ತಮ್ಮ ಒಳಿತನ್ನು ಬಯಸುವ ಜನಪರ ನಾಯಕನನ್ನು ತಾವೇ ಆಯ್ಕೆ ಮಾಡಿ ಕಳಿಸಲು ಮತದಾನ ಎಂಬ ಪ್ರಕ್ರಿಯೆ ಬೇಕು. ದೇಶಕ್ಕೆ ಒಳಿತು ಮಾಡುವ ನಾಯಕನನ್ನು ಚುನಾಯಿಸುವುದು ಪ್ರಜೆಗಳ ಜವಾಬ್ದಾರಿ. ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಹೊಣೆಯ ಕುರಿತು ಜಾಗೃತಿ ಮೂಡಿಸುವುದಕ್ಕಾಗಿಯೇ ಜ.25ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ ಎಂದು ಅವರು ಹೇಳಿದರು.

ADVERTISEMENT

ಹಿರಿಯ ಶಿಕ್ಷಕ ಶೇಷನಗೌಡ ಪಾಟೀಲ ಮಾತನಾಡಿ,‘ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಪಾವಿತ್ರ್ಯತೆ ಕಾಪಾಡಬೇಕು’ ಎಂದರು.

ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಾರ್ವಜನಿಕರು, ಶಾಲಾ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.