ADVERTISEMENT

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ: ‘ರಾಜಕೀಯ ಪಕ್ಷಗಳು ಬಿಎಲ್‌ಎಗಳ ನೇಮಕ ಮಾಡಿ’

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 6:58 IST
Last Updated 23 ಫೆಬ್ರುವರಿ 2026, 6:58 IST
<div class="paragraphs"><p>ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ</p></div>

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ

   

ಕೃಪೆ: X/@ECISVEEP

ಕೊಪ್ಪಳ: ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆಯ ಸಿದ್ದತೆಗಾಗಿ ಜಿಲ್ಲೆಯಲ್ಲಿ ಮ್ಯಾಪಿಂಗ್ ಕಾರ್ಯ ನಡೆಯುತ್ತಿದ್ದು, ರಾಜಕೀಯ ಪಕ್ಷಗಳು ಬಿಎಲ್‌ಎ ಗಳನ್ನು ನೇಮಕ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

ADVERTISEMENT

ಅವರು ಶುಕ್ರವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯದ ಪೂರ್ವಭಾವಿ ಸಿದ್ದತೆಯ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಪ್ರೀಲ್ ತಿಂಗಳಿನಲ್ಲಿ ಎಸ್‌ಐಆರ್ ಜಾರಿಯಾಗುವ ಸಾಧ್ಯತೆಯಿದ್ದು, ಪೂರ್ವದಲ್ಲಿ ಜಿಲ್ಲೆಯಲ್ಲಿ ಮ್ಯಾಂಪಿಂಗ್ ಕಾರ್ಯವನ್ನು ಮಾಡುತ್ತಿದ್ದೇವೆ. ಮ್ಯಾಪಿಂಗ್ ಆಂಡ್‌ ಪ್ರೋಜೆನಿ ಆಫ್ ಎಲೆಕ್ಟರ್ಸ್ ಆಧಾರದ ಮೇಲೆ ಪ್ರಕಟಿಸಲಾದ ಮತದಾರರ ಪಟ್ಟಿಗಳಲ್ಲಿಯ ಮತದಾರರನ್ನು 2002ರ ಮಾತದಾರರ ಪಟ್ಟಿಗಳೊಂದಿಗೆ ಪರಿಶೀಲಿಸಿ, ಬಿಎಲ್‌ಓ ಆ್ಯಪ್‌ನಲ್ಲಿ ಮ್ಯಾಪಿಂಗ್ ಕಾರ್ಯವನ್ನು ಮತ್ತು 2002ರ ಮತದಾರರ ಪಟ್ಟಿಯಲ್ಲಿ ಇರದೇ ಇರುವ ಮತದಾರರನ್ನು ಪ್ರೋಜೆನಿ ಮಾಡುವ ಮುಖಾಂತರ ಮ್ಯಾಪಿಂಗ್ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಪ್ರಸ್ತುತ ಇರುವ ಮತದಾರರ ಪಟ್ಟಿಗಳಲ್ಲಿ ಭಾವಚಿತ್ರವು ಸರಿಯಾಗಿ ಮುದ್ರಣವಾಗದಿದ್ದಲ್ಲಿ ಮತ್ತು ಇತರೆ ನಮೂದುಗಳು ಸರಿಯಾಗಿ ಇರದೇ ಇದ್ದಲ್ಲಿ ಸೂಕ್ತ ಭಾವಚಿತ್ರದೊಂದಿಗೆ ನಮೂನೆ 8 ಹಾಗೂ ಇತರೆ ದೋಷಗಳಿದ್ದಲ್ಲಿ ಸೂಕ್ತ ದಾಖಲೆಗಳನ್ನು ಸರಿಪಡಿಸಿಕೊಳ್ಳುವ ಪ್ರಕ್ರಿಯೆಯು ಜಾರಿಯಲ್ಲಿದ್ದು, ಈ ಕುರಿತು ರಾಜಕೀಯ ಪಕ್ಷಗಳು ಗಮನ ಹರಿಸುವುದು ಅತ್ಯವಶ್ಯಕವಾಗಿದೆ ಎಂದರು.

ಉಪವಿಭಾಗಾಧಿಕಾರಿ ಮಹೇಶ್ ಮಾಲಗಿತ್ತಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಆಹಾರ ಇಲಾಖೆ ಉಪನಿರ್ದೇಶಕ ಸೂರ್ಯಕುಮಾರ, ಜಿಲ್ಲಾ ಚುನಾವಣಾ ಶಾಖೆಯ ತಹಶಿಲ್ದಾರ ರವಿಕುಮಾರ ವಸ್ತ್ರದ್, ಶಿರಸ್ತೆದಾರ ನಾಗರಾಜ್, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಕೃಷ್ಣ ಇಟ್ಟಂಗಿ, ಸೋಮನಗೌಡ, ಕೃಷ್ಣ ಶೆಟ್ಟರ್, ಸೈಯದ್ ನಾಸೀರ ಹುಸೈನಿ, ಅಮರೇಶ್ ಮುರಳಿ, ಮೈಲಾರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.