ಯಲಬುರ್ಗಾ: ಅರ್ಹತೆ ಹೊಂದಿದ ಮತದಾರರು ಯಾವುದೇ ಕಾರಣಕ್ಕೂ ಮತದಾನದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಕುರಿತು ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಸಲುವಾಗಿ ಚುನಾವಣಾ ಆಯೋಗವು ಮತದಾರರ ದಿನಾಚರಣೆಯ ಮೂಲಕ ಜಾಗೃತಿ ಮೂಡಿಸುತ್ತಿದೆ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಜೆ.ರಂಗಸ್ವಾಮಿ ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 18 ವರ್ಷ ತುಂಬಿದ ಯುವಕರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವುದು, ದೇಶದ ಹಿತಕ್ಕಾಗಿ ಹಾಗೂ ಸಂವಿಧಾನ ಬದ್ಧವಾಗಿ ಲಭ್ಯವಾಗುವ ಮತದಾನದ ಹಕ್ಕನ್ನು ಕಡ್ಡಾಯವಾಗಿ ಸಂಭ್ರಮದಿಂದ ಚಲಾವಣೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ಮತದಾನ ಅತ್ಯಂತ ಮಹತ್ವದ್ದಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಬಸವರಾಜ ತೆನ್ನಳ್ಳಿ ಮಾತನಾಡಿದರು.
ವಕೀಲರ ಸಂಘದ ಅಧ್ಯಕ್ಷ ಪ್ರಕಾಶ ಬೇಲೇರಿ, ಹೆಚ್ಚುವರಿ ಸರ್ಕಾರಿ ವಕೀಲ ಮಲ್ಲನಗೌಡ ಪಾಟೀಲ ಸೇರಿ ಅನೇಕರು ಮಾತನಾಡಿದರು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ, ಕಾಲೇಜಿನ ಪ್ರಾಚಾರ್ಯ ಮಲ್ಲಿಕಾರ್ಜುನಗೌಡ ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.