ADVERTISEMENT

ಕನಕಗಿರಿ: ಮತದಾರರ ಪಟ್ಟಿ ಪರಿಷ್ಕರಣೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2020, 16:48 IST
Last Updated 22 ನವೆಂಬರ್ 2020, 16:48 IST
ಕನಕಗಿರಿ ತಹಶೀಲ್ದಾರ್ ರವಿ ಅಂಗಡಿ ಅವರು ಭಾನುವಾರ ನಡೆದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯ ಮಿಂಚಿನ ಸಂಚಾರದಲ್ಲಿ ಭಾಗವಹಿಸಿದ್ದರು
ಕನಕಗಿರಿ ತಹಶೀಲ್ದಾರ್ ರವಿ ಅಂಗಡಿ ಅವರು ಭಾನುವಾರ ನಡೆದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯ ಮಿಂಚಿನ ಸಂಚಾರದಲ್ಲಿ ಭಾಗವಹಿಸಿದ್ದರು   

ಕನಕಗಿರಿ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಭರದಿಂದ ನಡೆದಿದ್ದು, ತಹಶೀಲ್ದಾರ್ ರವಿ ಅಂಗಡಿ ಅವರು ಭಾನುವಾರ ವಿವಿಧ ಮತಗಟ್ಟೆಗಳಿಗೆ ಹಠಾತ್ ಭೇಟಿ ನೀಡಿದರು.

ಪಟ್ಟಣ ಪಂಚಾಯಿತಿ, ತಹಶೀಲ್ದಾರ್, ಉಪ ತಹಶೀಲ್ದಾರ್ ಕಚೇರಿಗಳಿಗೆ ಭೇಟಿ ನೀಡಿ ಬೂತ್ ಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನಂತರ ಮಾತನಾಡಿದ ರವಿ,‘18 ವರ್ಷ ತುಂಬಿದ ಯುವ ಮತದಾರರರು ಸೂಕ್ತ ದಾಖಲೆ ನೀಡಿ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಸೇರ್ಪಡೆ ಮಾಡಿಕೊಳ್ಳಬೇಕು. ಚುನಾವಣಾ ಗುರುತಿನ ಚೀಟಿಗಳಲ್ಲಿ ತಪ್ಪುಗಳು ಕಂಡು ಬಂದಿದ್ದರೆ ತಿದ್ದುಪಡಿಗೂ ಅವಕಾಶ ಇದೆ. ಮೃತರಾದವರ ಹೆಸರುಗಳನ್ನು ತೆಗೆದು ಹಾಕಲಾಗುವುದು’ ಎಂದು ತಿಳಿಸಿದರು.

ADVERTISEMENT

ಕಂದಾಯ ನಿರೀಕ್ಷಕ ಸೈಯದ್ ಬಷಿರುದ್ದೀನ್, ಆಹಾರ ನಿರೀಕ್ಷಕ ಗಯಾಸುದ್ದೀನ್, ಚುನಾವಣಾ ವಿಭಾಗದ ಸೋಮನಾಥ, ಗುರುಲಿಂಗ, ಬೂತ್ ಮಟ್ಟದ ಅಧಿಕಾರಿಗಳಾದ ಶಾಮೀದಸಾಬ ಲೈನದಾರ ಹಾಗೂ ರವೀಂದ್ರ ಬೋಂದಾಡೆ
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.