ತಾವರಗೇರಾ: ’ಗ್ರಾಮಗಳಲ್ಲಿ ಸಂಗ್ರಹವಾದ ಘನ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದಕ್ಕಾಗಿಯೇ ಘಟಕವನ್ನು ನಿರ್ಮಿಸಲಾಗುತ್ತಿದೆ‘ ಎಂದು ತಾಲ್ಲೂಕು ಪಂಚಾಯಿತಿ ಇಒ ಡಾ.ಜಯರಾಂ ಚವ್ಹಾಣ್ ಹೇಳಿದರು.
ಸಮೀಪದ ಕಿಲ್ಲಾರಹಟ್ಟಿ ಗ್ರಾಮದಲ್ಲಿ ಗುರುವಾರ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಹಮ್ಮಿಕೊಂಡಿರುವ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
‘1 ಎಕರೆ ಪ್ರದೇಶದಲ್ಲಿ ಅಂದಾಜು ₹ 20 ಲಕ್ಷ ವೆಚ್ಚದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲಾಗುವುದು, ವಿಲೇವಾರಿ ಘಟಕದ ಆವರಣಗೊಡೆ, ಗೇಟ್ ಅಳವಡಿಕೆ, ಕಸ ಸಾಗಣೆ ವಾಹನಗಳು ಹಾಗೂ ಇತರೆ ಅಗತ್ಯ ಉಪಕರಣಗಳನ್ನು ಖರೀದಿ ಕೂಡ ಮಾಡಲಾಗುವುದು‘ ಎಂದರು.
ಕಿಲ್ಲಾರಹಟ್ಟಿ ಗ್ರಾ.ಪಂ. ಅಧ್ಯಕ್ಷೆ ಶರಣಮ್ಮ ರಾಠೋಡ್ ಅಧ್ಯಕ್ಷತೆ ವಹಿಸಿದ್ದರು.
ಜಿ.ಪಂ ಸದಸ್ಯ ಹನಮಗೌಡ ಪೊಲಿಸ್ ಪಾಟೀಲ್, ಸಹಾಯಕ ನಿರ್ದೇಶಕ ವೆಂಕಟೇಶ ವಂದಾಲ, ನರೇಗಾ ತಾಂತ್ರಿಕ ಸಂಯೋಜಕರಾದ ಚಂದ್ರಶೇಖರ, ಪಿಡಿಒ ಗುರಪ್ಪ ನಾಯಕ, ಗ್ರಾ.ಪಂ ಸದಸ್ಯರಾದ ಉಮೇಶ ರಾಠೋಡ್, ಶರಣೇಗೌಡ ಪಾಟೀಲ್, ದೇವೆಂದ್ರಪ್ಪ ರಾಠೋಡ್, ಪ್ರಮುಖರು ಗ್ರಾಪಂ ಸಿಬ್ಬಂದಿ ಹಾಗೂ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.