ADVERTISEMENT

ಹಾವು ಕಚ್ಚಿ ಗೃಹಿಣಿ ಸಾವು

​ಪ್ರಜಾವಾಣಿ ವಾರ್ತೆ
Published 9 ಜೂನ್ 2023, 15:39 IST
Last Updated 9 ಜೂನ್ 2023, 15:39 IST

ಕನಕಗಿರಿ: ಸಮೀಪದ ಸೋಮಸಾಗರ ಗ್ರಾಮದಲ್ಲಿ ಶುಕ್ರವಾರ ಮಹಿಳೆಯೊಬ್ಬರಿಗೆ ಹಾವು ಕಚ್ಚಿ ಮೃತಪಟ್ಟಿದ್ದಾರೆ.

ಲಕ್ಷ್ಮಮ್ಮ‌ ರಾಮಪ್ಪ ಹರಿಜನ (38) ಮೃತಪಟ್ಟವರು.‌

ಬೆಳಗಿನ‌ ಜಾವ ಹೊಲದಲ್ಲಿ ಬೆಳೆಗಳಿಗೆ ನೀರು‌ ಹರಿಸಲು ತೆರಳಿದಾಗ ಈ ಘಟನೆ ನಡೆದಿದೆ. ಚಿಕಿತ್ಸೆಗಾಗಿ ಇಲ್ಲಿನ‌ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿದರೂ ಚಿಕಿತ್ಸೆಗೆ ಸ್ಪಂದಿಸದೇ  ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಇನ್‌ಸ್ಪೆಕ್ಟರ್‌ ಜಗದೀಶ ತಿಳಿಸಿದ್ದಾರೆ.

ADVERTISEMENT

ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.