ADVERTISEMENT

ಹಾವು ಕಡಿತ; ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 20 ಜೂನ್ 2022, 3:14 IST
Last Updated 20 ಜೂನ್ 2022, 3:14 IST
ಯಲಬುರ್ಗಾ ತಾಲ್ಲೂಕಿನ ಬೂನಕೊಪ್ಪ ಗ್ರಾಮದಲ್ಲಿ ಭಾನುವಾರ ಕೃಷಿ ಚಟುವಟಿಕೆ ಕೈಗೊಂಡಿದ್ದ ಸಂದರ್ಭದಲ್ಲಿ ಹಾವು ಕಚ್ಚಿದ ಪರಿಣಾಮ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಸಚಿವ ಹಾಲಪ್ಪ ಆಚಾರ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು

ಯಲಬುರ್ಗಾ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಾವು ಕಚ್ಚಿದ ಪರಿಣಾಮಮಹಿಳೆ ಮೃತಪಟ್ಟಿರುವ ಘಟನೆ ಭಾನುವಾರ ತಾಲ್ಲೂಕಿನ ಬೂನಕೊಪ್ಪ ಗ್ರಾಮದಲ್ಲಿ ಜರುಗಿದೆ.

ಗ್ರಾಮದ ನಿಂಗಮ್ಮ ಮಾಟರಂಗಿ ಎಂಬುವರು ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಹಾವು ಕಚ್ಚಿದೆ. ತಕ್ಷಣವೇ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೇ ಮಹಿಳೆ ಮೃತರಾಗಿದ್ದಾರೆ ಎಂದು ಕುಟುಂಬದ ಸದಸ್ಯರು
ತಿಳಿಸಿದ್ದಾರೆ.

ಸ್ಥಳೀಯ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.

ADVERTISEMENT

ಭೇಟಿ: ಸುದ್ದಿ ತಿಳಿದ ಸಚಿವ ಹಾಲಪ್ಪ ಆಚಾರ ಆಸ್ಪತ್ರೆಗೆ ಭೇಟಿ ನೀಡಿ ಮೃತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

ಹಾಗೆಯೇ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದ್ದಾರೆ. ತಹಶೀಲ್ದಾರ್ ಶ್ರೀಶೈಲ ತಳವಾರ, ವೈದ್ಯಾಧಿಕಾರಿಗಳು, ಮುಖಂಡರಾದ ಬಸವಲಿಂಗಪ್ಪ ಭೂತೆ, ವೀರಣ್ಣ ಹುಬ್ಬಳ್ಳಿ, ಕಳಕಪ್ಪ ಕಂಬಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.