ಗಂಗಾವತಿ:ಜಾನುವಾರು ಮೇಯಿಸಲು ತೆರಳಿದ್ದ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಾಲ್ಲೂಕಿನ ಜಂಗ್ಲಿ ರಂಗಾಪುರ ಗ್ರಾಮದ ಮಾಬಮ್ಮ (55) ಗಾಯಗೊಂಡವರು.
ಮಾಬಮ್ಮ ಅವರ ತಲೆ ಹಾಗೂ ಮುಖಕ್ಕೆ ಗಾಯಗಳಾಗಿವೆ. ಜನರ ಚೀರಾಟದಿಂದ ಚಿರತೆ
ಓಡಿ ಹೋಗಿದೆ.
ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಶಾಸಕ ಪರಣ್ಣ ಮುನವಳ್ಳಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ
ವಿಚಾರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.