
ಕನಕಗಿರಿ: ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಹಲವಾರು ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಲು ಹತ್ತು ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದೆ’ ಎಂದು ಜಿಲ್ಲಾ ನಿರ್ದೇಶಕ ಪ್ರಕಾಶ ರಾವ್ ತಿಳಿಸಿದರು.
ಪಟ್ಟಣದ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಭಾನುವಾರ ನಡೆದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಉನ್ನತ ಸಾಧನೆ ಮಾಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರುತ್ತಿರುವುದು ಸಂತಸದ ವಿಚಾರ. ಮಹಿಳೆಯರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಕಾನೂನುಗಳನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಂಡು ಯಶಸ್ಸು ಕಾಣಲು ಸಾಧ್ಯ’ ಎಂದರು.
ಉಪನ್ಯಾಸಕಿ ಗೀತಾ ಪಾಟೀಲ ಮಾತನಾಡಿ, ‘ಆರ್ಥಿಕ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಹಿರಿದಾಗಿದೆ, ಸಣ್ಣ ಪುಟ್ಟ ಉದ್ಯೋಗ ಹಾಗೂ ಕೃಷಿ ಚಟುವಟಿಕೆಗಳಲ್ಲಿ ದುಡಿದು ಜೀವನ ಸಾಗಿಸುತ್ತಾರೆ’ ಎಂದು ತಿಳಿಸಿದರು.
ಶಿಕ್ಷಕಿ ಅನ್ನಪೂರ್ಣ, ಹುಸೇನಬೀ ಚಳ್ಳಮರದ ಸೇರಿದಂತೆ ಅನೇಕರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.