ADVERTISEMENT

‘ಮಹಿಳೆಯರು ಸ್ವಾವಲಂಬಿಗಳಾಗಿ’

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 14:16 IST
Last Updated 7 ಏಪ್ರಿಲ್ 2021, 14:16 IST
ತಾವರಗೇರಾ ಪಟ್ಟಣದ ಶಶಿಧರ ಸ್ವಾಮಿ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು
ತಾವರಗೇರಾ ಪಟ್ಟಣದ ಶಶಿಧರ ಸ್ವಾಮಿ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು   

ತಾವರಗೇರಾ: ಪಟ್ಟಣದ ಶಶಿಧರ ಸ್ವಾಮಿ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಅಂತರರಾಷ್ಟ್ರೀಯ ಮಹಿಳಾ ದಿನ ಹಾಗೂ ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಯಿತು.

ಶಿಕ್ಷಕಿ ರಾಜಶ್ರೀ ಬಿ. ಪಾಟೀಲ ಮಾತನಾಡಿ,‘ಮಹಿಳೆಯರು ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಸ್ವಾವಲಂಬನೆ ಸಾಧಿಸಬೇಕು’ ಎಂದು ಹೇಳಿದರು.

ಉಪನ್ಯಾಸಕಿ ಅಕ್ಕಮಹಾದೇವಿ ಮಾತನಾಡಿ,‘ಮಹಿಳೆಯರು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ಆರೋಗ್ಯಯುತ ಜೀವನ ನಡೆಸಬೇಕು’ ಎಂದರು.

ADVERTISEMENT

ಪ್ರಾಚಾರ್ಯ ಸಿದ್ದಲಿಂಗಯ್ಯ ಹಿರೇಮಠ ಮತ್ತು ಉಪನ್ಯಾಸಕರು ಕಳೆದ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ತಾಯಂದಿರನ್ನು ಸನ್ಮಾನಿಸಿದರು.

ಉಪನ್ಯಾಸಕರಾದ ಯಂಕೋಬ ಶಿರಗುಡ್ಡಿ, ಪ್ರಕಾಶ, ಕೊಟ್ರೇಶ, ರಾಜಶೇಖರ ಹಾಗೂ ಸಿಬ್ಬಂದಿ ಇದ್ದರು.

ಉಪನ್ಯಾಸಕಿ ಭಾರತಿ ನಿರೂಪಿಸಿದರು. ಕಾವ್ಯ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.