ADVERTISEMENT

ಸುಳೇಕಲ್: ವಿಶ್ವ ಪರಿಸರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2021, 12:25 IST
Last Updated 27 ಜೂನ್ 2021, 12:25 IST
ಕನಕಗಿರಿ ಸಮೀಪದ ಸುಳೇಕಲ್ ಗ್ರಾಮದಲ್ಲಿ ಈಚೆಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು
ಕನಕಗಿರಿ ಸಮೀಪದ ಸುಳೇಕಲ್ ಗ್ರಾಮದಲ್ಲಿ ಈಚೆಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು   

ಸುಳೇಕಲ್ (ಕನಕಗಿರಿ): ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸುಳೇಕಲ್ ಬೃಹನ್ಮಠದ ಸಹಯೋಗದಲ್ಲಿ ಈಚೆಗೆ ಸುಳೇಕಲ್ ಗ್ರಾಮದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.

ಬೃಹನ್ಮಠದ ಭುವನೇಶ್ವರಯ್ಯ ತಾತನವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು,‘ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ’ ಎಂದರು.

ADVERTISEMENT

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಕಾಂತಪ್ಪ ಮಾತನಾಡಿ,‘ತಾಲ್ಲೂಕಿನಲ್ಲಿ 2 ಸಾವಿರ ಸಸಿಗಳನ್ನು ದೇವಸ್ಥಾನ, ಮಸೀದಿ, ಶಾಲೆ ಇತರೆ ಸ್ಥಳದಲ್ಲಿ ನೆಡುವ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಪರಿಸರ ಉಳಿಸಿ ಬೆಳಸುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಂಡಮ್ಮ, ಪ್ರಮುಖರಾದ ಜಗದೀಶ ಅಂಗಡಿ, ದಿನೇಶ, ವೀರೇಶ ಹಾಗೂ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.