
ಪ್ರಜಾವಾಣಿ ವಾರ್ತೆಅಮಾನತು
ಕೊಪ್ಪಳ: ಜಿಲ್ಲೆಯ ಎರಡು ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಹುಳುಗಳು ಕಾಣಿಸಿಕೊಂಡಿದ್ದ ಪ್ರಕರಣದಲ್ಲಿ ಕರ್ತವ್ಯಲೋಪದ ಕಾರಣಕ್ಕೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಪಿ.ಎಂ. ಪೋಷಣ ಶಕ್ತಿ ನಿರ್ಮಾಣ ಯೋಜನೆಯ ಶಿಕ್ಷಣಾಧಿಕಾರಿ ಅನಿತಾ, ಕೊಪ್ಪಳ ತಾಲ್ಲೂಕಿನ ಸಹಾಯಕ ನಿರ್ದೇಶಕ ಗುಡಿ ಮಲ್ಲಿಕಾರ್ಜುನ ಹಾಗೂ ಕುಷ್ಟಗಿ ತಾಲ್ಲೂಕಿನ ಸಹಾಯಕ ನಿರ್ದೇಶಕ ಮಹಾಂತಯ್ಯ ಸೊಪ್ಪಿಮಠ ಅವರನ್ನು ಸೇವೆಯಿಂದ ಅಮಾನತು ಮಾಡಿ ಸರ್ಕಾರ ಆದೇಶಿಸಿದೆ.
ಕೊಪ್ಪಳ ತಾಲ್ಲೂಕಿನ ಬಿಸರಳ್ಳಿ ಗ್ರಾಮದ ನೃಪತುಂಗ ಪ್ರೌಢಶಾಲೆ ಮತ್ತು ಕುಷ್ಟಗಿ ತಾಲ್ಲೂಕಿನ ಮುದೇನೂರು ಸರ್ಕಾರಿ ಪ್ರೌಢಶಾಲೆಗಳಲ್ಲಿ ಬಿಸಿಯೂಟದಲ್ಲಿ ಕಳಪೆ ಆಹಾರ ಮತ್ತು ಊಟದಲ್ಲಿ ಹುಳುಗಳು ಕಂಡು ಬಂದಿದ್ದವು. ಈ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.